spot_img
Wednesday, April 1, 2026
spot_img

ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ 14,730 ಕೋಟಿ ರೂ.ಗಳನ್ನು ವ್ಯಯಿಸಿದೆ : ಬಿಜೆಪಿ ಆರೋಪ

ಜನಪ್ರತಿನಿಧಿ (ನವದೆಹಲಿ) : ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿಟ್ಟಿರುವ ನಿಧಿಯನ್ನು ರಾಜ್ಯ ಚುನಾವಣಾ ಸಮಯದಲ್ಲಿ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸಲು ಬೇರೆಡೆಗೆ ತಿರುಗಿಸುತ್ತಿದೆ. ಇದು ಅವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಸಂವಿಧಾನದ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಒಂದೆಡೆ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾದ 39,121 ಕೋಟಿ ರೂ.ಗಳಲ್ಲಿ 14,730 ಕೋಟಿ ರೂ.ಗಳನ್ನು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವ್ಯಯಿಸುತ್ತಿದೆ ಎಂದು ಅವರು ವರದಿಯನ್ನು ಉಲ್ಲೇಖಿಸಿ ಟೀಕಿಸಿದರು.

ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಕಲಿ ನಿರೂಪಣೆಯನ್ನು ಹರಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ಮೋದಿ ಸರ್ಕಾರ ದೊಡ್ಡ ಜನಾದೇಶವನ್ನು ಪಡೆಯುವ ಮೂಲಕ ಸಂವಿಧಾನವನ್ನು ಬದಲಾಯಿಸಲು ಬಯಸಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಅವರ ಕಾರ್ಯಗಳೇ ಅವರ ಧ್ವಂದ್ವ ನೀತಿಯನ್ನು ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ವಿಚ್ಛೇದಿತ ಮುಸ್ಲಿಂ ಮಹಿಳೆಗೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್‌ನ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!