spot_img
Saturday, February 14, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಸಹೋದರಿ ನಿವೇದಿತಾ ಪ್ರತಿಷ್ಠಾನ (ರಿ) ಉಡುಪಿ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್, ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ನಾಗಲಕ್ಷ್ಮಿ ಬೆಂಗಳೂರು ಇವರು ಕಾರ್ಯಾಗಾರವನ್ನು ನಡೆಸಿಕೊಟ್ಟು, ಎಲ್ಲರಲ್ಲಿಯೂ ಒಂದು ವಿಶೇಷ ಕೌಶಲ್ಯ ಇರುತ್ತದೆ,ಇಂದಿನ ಜೀವನದಲ್ಲಿ ಶಿಕ್ಷಣದ ಜೊತೆ-ಜೊತೆಗೆ ಕೌಶಲ್ಯವನ್ನೂ ವೃದ್ಧಿಸಿಕೊಳ್ಳುವುದು ಬಹಳ ಪ್ರಮುಖವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಪಡೆದ ಅನುಭವ ನಿಮ್ಮ ಜೀವನದ ಬದುಕಿನ ಅಡಿಪಾಯವಾಗಬೇಕೆಂಬ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದರು.

ಕಾರ್ಯಕ್ರಮದಲ್ಲಿ ರೋಟರಿ ರಿವರ್ ಸೈಡ್ ಕುಂದಾಪುರದ ಅಧ್ಯಕ್ಷರಾದ ಡಾ|ವಿಶ್ರಾಂತ್ ಎನ್ ಶೆಟ್ಟಿ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿ ಮೆಲ್ಲೊ, ನಿಕಟಪೂರ್ವ ಅಧ್ಯಕ್ಷರಾದ ಕೌಶಿಕ್ ಯಡಿಯಾಳ, ಸಹೋದರಿ ನಿವೇದಿತಾ ಪ್ರತಿಷ್ಠಾನದ ಬಳಗದವರು ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!