spot_img
Wednesday, April 1, 2026
spot_img

ವಿಜಯೇಂದ್ರ ಬಂಧನ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ-ಬಿ. ವೈ. ರಾಘವೇಂದ್ರ

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದದ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರರವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ. ಮುಖ್ಯಮಂತ್ರಿಗಳು ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ, “ಮುಖ್ಯಮಂತ್ರಿಗಳು ಮುಡಾ ಹಗರಣ ಮೂಲಕ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಅನುಕೂಲವಾಗುಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ಅಕ್ಷಮ್ಯ ಅದೇ ರೀತಿ “ಹೋರಾಟ ಹತ್ತಿಕ್ಕುವುದು ಸಹ ಅಕ್ಷಮ್ಯ ಅಪರಾಧ. ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ಸರ್ಕಾರವೋ ಅಥವಾ ತೊಗಲಕ್ ನೀತಿಯ ಸರ್ಕಾರವೋ ಎಂಬ ಅನುಮಾನ ಮೂಡಿದೆ. ವಿಜಯೇಂದ್ರ ಬಂಧನ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!