spot_img
Wednesday, April 1, 2026
spot_img

ಜೂನ್ 25ನ್ನು ʼಸಂವಿಧಾನ ಹತ್ಯೆ ದಿನʼ ಎಂದು ಆಚರಣೆ : ಕೇಂದ್ರ ಸರ್ಕಾರ ಘೋಷಣೆ

ಜನಪ್ರತಿನಿಧಿ ನವದೆಹಲಿ:  ಜೂನ್ 25ನ್ನು ಸಂವಿಧಾನ ಹತ್ಯೆ ದಿನ ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಈ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನೂ ಹೊರಡಿಸಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಆ ಕಾರಣದಿಂದ ಆ ದಿನವನ್ನು ಸಂವಿಧಾನ ಹತ್ಯೆ ದಿನವೆಂದು ಆಚರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

‘1975ರ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿ ತಮ್ಮ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿ, ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಭಾರತದ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದ್ದರು. ದೇಶದ ಲಕ್ಷಾಂತರ ಜನರನ್ನು ವಿನಾಕಾರಣ ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು. ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ನಿರ್ಧರಿಸಿದೆ. 1975ರ ತುರ್ತುಪರಿಸ್ಥಿತಿಯ ಅಮಾನವೀಯ ನೋವನ್ನು ಸಹಿಸಿಕೊಂಡವರೆಲ್ಲರ ಅಪಾರ ಕೊಡುಗೆಯನ್ನು ಈ ದಿನ ನೆನಪಿಸುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹೇಳಿದ್ದಾರೆ.

ಜೂನ್ 25ನ್ನು ʼಸಂವಿಧಾನ ಹತ್ಯೆ ದಿನʼ ಎಂದು ಆಚರಣೆ : ಕೇಂದ್ರ ಸರ್ಕಾರ ಘೋಷಣೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!