spot_img
Wednesday, April 1, 2026
spot_img

ಬೈಂದೂರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯ ಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಬಿ.ಎಂ. ಭಟ್ ಹೇಳಿದರು.

ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೪-೨೫ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿ, ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು.

ನೂತನ ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-೧ರ ಸಹಾಯಕ ಗವರ್ನರ್‌ಡಾ. ರಾಜೇಂದ್ರ ಶೆಟ್ಟಿ ಕ್ಲಬ್‌ನ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಗೊಂಡರು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಲಿಕಾ ಸಹಾಯಧನ ಹಾಗೂ ಆರೋಗ್ಯ ಸಮಸ್ಯೆ ಉಳ್ಳವರಿಗೆ ವೈದ್ಯಕೀಯ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸಕ ಸಾಹಿತಿ ಶ್ರೀಧರ ಶೇಟ್ ಶಿರಾಲಿ, ರೋಟರಿ ವಲಯ ಸೇನಾನಿ ಪ್ರದೀಪ್ ಡಿ. ಕೆ. ಉಪಸ್ಥಿತರಿದ್ದರು.

ಪೂರ್ಣಿಮಾ ಪೈ ಪ್ರಾರ್ಥಿಸಿದರು. ನಿರ್ಗಮ ಅಧ್ಯಕ್ಷ ಶಿರೂರು ಪ್ರಸಾದ ಪ್ರಭು ಸ್ವಾಗತಿಸಿ, ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನಿರ್ಗಮನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಹಿಂದಿನ ಸಾಲಿನ ಕಾರ್ಯಚಟುವಟಿಕೆಗಳ ವರದಿ ವಾಚಿಸಿದರು. ವೈ.ಮಂಗೇಶ ಶ್ಯಾನುಭಾಗ್ ನಿರೂಪಿಸಿ, ನೂತನ ಕಾರ್ಯದರ್ಶಿ ಸುನಿಲ್ ಎಚ್.ಜಿ. ವಂದಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!