spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಗ್ನಿಶಾಮಕ ಪ್ರಾತ್ಯಕ್ಷಿಕೆ

ಹೆಮ್ಮಾಡಿ: ಜೆಸಿ‌ಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆಯವರು ಅಗ್ನಿನಂದಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಕಿರಣ್ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಜ್ಯೂನಿಯರ್ ಜೆಸಿ‌ಐ ರಾಷ್ಟ್ರೀಯ ಮಟ್ಟದ ಸಂಯೋಜಕ ರಾಜೇಶ್ ರಾಜನ್, ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕುಂದಾಪುರ ಸಿಟಿ ಜೆಸಿ‌ಐ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿ ವಿ.ಸುಂದರ್ ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು. ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಕಿರಣ್ ಕಾರ್ಯಕ್ರಮ ನಿರ್ವಹಿಸಿ, ಜನತಾ ಹೆಮ್ಮಾಡಿಯ ಪ್ರೌಢಶಾಲಾ ಸಹ-ಶಿಕ್ಷಕ ಜಗದೀಶ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!