spot_img
Saturday, December 7, 2024
spot_img

ಮತ್ತೆ ಬಿರುಸುಗೊಂಡ ಮಳೆ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳು ಉತ್ತಮ ಮಳೆ | ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಜನಪ್ರತಿನಿಧಿ  (ಮಂಗಳೂರು): ಕರಾವಳಿಯಲ್ಲಿ ಮರಳಿ ನಿನ್ನೆ(ಶುಕ್ರವಾರ)ಯಿಂದ ಮುಂಗಾರು ಮಳೆ ವೇಗ ಪಡೆದುಕೊಂಡಿದೆ. ದ.ಕ.ಜಿಲ್ಲೆಯಾದ್ಯಂತ ಸಂಜೆಯಿಂದ ಆಗಾಗ ಹಗುರದಿಂದ ಸಾಧಾರಣ ಮಳೆ ಕಾಣಿಸಿದೆ.

ಕಳೆದ ಎರಡು ದಿನಗಳ ತುಸು ವಿರಾಮದ ಬಳಿಕ ದ.ಕ.ದಲ್ಲಿ ಮಳೆ ಪ್ರಮಾಣ ಮತ್ತೆ ಹೆಚ್ಚಾಗಿದೆ. ಶುಕ್ರವಾರ ಮಧ್ಯಾಹ್ನದವರೆಗೆ ತುಸು ಸೂರ್ಯ ಬಿಸಿಲು ಇಳಿಸಿದ್ದ. ಅಲ್ಲಲ್ಲಿ ತುಂತುರು ಹನಿಮನೆ ಕಂಡುಬಂದರೆ, ಮಧ್ಯಾಹ್ನ ನಂತರ ಎಲ್ಲೆಡೆ ಪೂರ್ಣ ಪ್ರಮಾಣದ ಮೋಡ ಕವಿದ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮಂಗಳೂರು, ಕೊಣಾಜೆ, ಸುರತ್ಕಲ್‌ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡುಗು ಸಹಿತ ಮಳೆ ಬಿರುಸುಗೊಂಡಿದೆ.

ಮುಂದಿನ 4 ದಿನಗಳು ಕರಾವಳಿ ಜಿಲ್ಲೆಗಳಾದ್ಯಂತ ಸಾಧಾರಣ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಮಲೆನಾಡು ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಜು.16 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು, ಕರಾವಳಿಯಲ್ಲಿ ಗಂಟೆಗೆ 40 ಕಿ.ಮೀ ನಿಂದ 48 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 1-2 ದಿನಗಳಲ್ಲಿ ಕರಾವಳಿಯಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ.

ಪಶ್ಚಿಮಘಟ್ಟದ ಕೆಳಭಾಗದ ಪ್ರದೇಶಗಳಾದ ಚಾರ್ಮಾಡಿ, ಶಿರಾಡಿ, ಆಗುಂಬೆ ಸುತ್ತಮುತ್ತ ಮಂಜು ಕವಿದ ವಾತಾವರಣ, ಉತ್ತಮ ಮಳೆ ಆಗಿದ್ದು, ವಾಹನ ಸಂಚಾರಕ್ಕೆ ತುಸು ತೊಂದರೆಯಾಗಿತ್ತು. ಈ ಭಾಗದಲ್ಲಿ ಮುಂದಿನ 2-3 ದಿನ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನದಿಮೂಲದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!