spot_img
Wednesday, April 1, 2026
spot_img

ಮಹರ್ಷಿ ವಾಲ್ಮೀಕಿ ನಿಗಮ ಬಹುಕೋಟಿ ಹಗರಣ : ಜುಲೈ 18ರವರೆಗೆ ಮಾಜಿ ಸಚಿವ ಎಲ್. ನಾಗೇಂದ್ರ ಇಡಿ ವಶಕ್ಕೆ !

ಜನಪ್ರತಿನಿಧಿ (ಬೆಂಗಳೂರು) : ಮಹರ್ಷಿ ವಾಲ್ಮೀಕಿ ನಿಗಮ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ED) ವಶಕ್ಕೆ ಸಿಲುಕಿರುವ ಮಾಜಿ ಸಚಿವ ಎಲ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.

ನಿನ್ನೆ(ಶುಕ್ರವಾರ) ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ  ಸುಮಾರು 10 ಗಂಟೆಗಳ ಕಾಲ ಅಧಿಕ ವಿಚಾರಣೆ ನಡೆಸಿ ಬಳಿಕ ಬಂಧಿಸಿದ್ದಾರೆ.

ಇನ್ನು, ನಿನ್ನೆ ತಡರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದ್ದು, ಇಂದು ಬೆಳಗ್ಗೆ ಯಲಹಂಕದಲ್ಲಿರುವ ಜಡ್ಜ್ ನಿವಾಸದಲ್ಲಿ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ಜುಲೈ 18ರವರೆಗೆ ಇಡಿ ಕಸ್ಟಡಿಗೆ ನಾಗೇಂದ್ರರನ್ನು ಒಪ್ಪಿಸಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ವಾಲ್ಮೀಕಿ ಬೋರ್ಡ್‌ನ 94 ಕೋಟಿಗೂ ಅಧಿಕ ಹಣದ ಅವ್ಯವಹಾರದ ಬಗ್ಗೆ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ ಎನ್ನಲಾಗಿದೆ. ವಿವಿಧ ಬ್ಯಾಂಕ್ ಖಾತೆಗಳನ್ನು ಮುಂದಿಟ್ಟು ಇ.ಡಿ ವಿಚಾರಣೆ ಮಾಡಿದೆ. ಹೈದರಾಬಾದ್ ನಲ್ಲಿ ಬೇನಾಮಿ ಖಾತೆಗಳೂ ಇವೆ ಎನ್ನಲಾಗಿದೆ.

ಯೂನಿಯನ್ ಬ್ಯಾಂಕ್ ಖಾತೆ ಎಂಜಿ ರೋಡ್‌ಗೆ ವರ್ಗಾಯಿಸಿದ್ದು ಯಾಕೆ? : ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದು ಹೇಗೆ ಎಂದು ಪ್ರಶ್ನೆ ಮಾಡಲಾಗಿದೆ. ಅಕ್ರಮದಲ್ಲಿ ನಾಗೇಂದ್ರ ಕೈವಾಡ, ಕುಮ್ಮಕ್ಕು ಇದೆ ಎನ್ನಲಾಗಿದ್ದು, ಇದಕ್ಕೆ ಇ.ಡಿ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಿಕ್ಕಿದ್ದು, ಇದೇ ಆಧಾರದಲ್ಲೇ ಅವರ ಬಂಧನವಾಗಿದೆ ಎನ್ನಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!