Sunday, September 8, 2024

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಿಟ್ಟಿಗೆದ್ದ ರೈತ ಸಂಘ | ಜುಲೈ 18ಕ್ಕೆ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ

ಜನಪ್ರತಿನಿಧಿ(ಮೈಸೂರು) : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕು ಎಂಬ ವಿಚಾರಗಳನ್ನು ಒಳಗೊಂಡು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18ರಂದು ಎಲ್ಲಾ ರಾಜ್ಯಾದಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಕೋಮುವಾದಿ, ಪ್ರಜಾಪ್ರಭುತ್ವ ವಿರೋಧಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಬಹಳ ನಿರೀಕ್ಷೆಯೊಂದಿಗೆ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತಂದಿತ್ತು. ವಿಧಾನಸೌಧದಲ್ಲಿ ಪಕ್ಷದ ಆಡಳಿತ ಹಾಗೂ ಅಧಿಕಾರಸ್ಥರ ಮುಖಗಳು ಬದಲಾಗಿವೆ. ಆದರೇ, ಜನರ ಆಶೋತ್ತರಗಳು ಈನ್ನೂ ಈಡೇರಿಲ್ಲ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಲು ಹೋರಾಟದ ಹಾದಿ ಹಿಡಿದಿದ್ದೇವೆ ಎಂದು ಹೇಳಿದರು.

ಈ ಸರ್ಕಾರದ ಅವಧಿಯ ಮೊದಲ ವರ್ಷದಲ್ಲೇ ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ದುರುಪಯೋಗ ಮಾಡಿಕೊಂಡ ಆರೋಪಕ್ಕೆ ಒಳಗಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜನಸಾಮಾನ್ಯರು ಬಯಸಿದ್ದ ಬದಲಾವಣೆ ಆಗಿಲ್ಲ. ಭ್ರಷ್ಟಾಚಾರದ ನಿರ್ಮೂಲನೆ ಇರಲಿ, ಅದನ್ನು ತಡೆಯುವಂತಹ ಪ್ರಯತ್ನವೂ ಆಗಿಲ್ಲ. ಭೂಮಾಫಿಯಾದ ಅಕ್ರಮ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆರೋಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!