Saturday, October 12, 2024

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2: ಆಂಗ್ಲಮಾದ್ಯಮ ವಿಭಾಗ ಉದ್ಘಾಟನೆ | ಶತಮಾನೋತ್ಸವ ಭವನಕ್ಕೆ ಶಿಲಾನ್ಯಾಸ

ಕುಂದಾಪುರ, ಜು.13: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಸ್ಥಾಪನೆಯಾಗಿ ನೂರು ವರ್ಷಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಶತಮಾನೋತ್ಸವಕ್ಕೆ ಪೂರ್ವಭಾವಿಯಾಗಿ ಶತಮಾನೋತ್ಸವ ಭವನ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಆಂಗ್ಲ ಮಾಧ್ಯಮ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಜು.13ರಂದು ನಡೆಯಿತು.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟನೆಯನ್ನು ನೆರವೇರಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಶಾಲೆಯ ಅತ್ಯಂತ ಹಿರಿಯ ವಿದ್ಯಾರ್ಥಿ ಬಗ್ವಾಡಿ ಮೆತ್ತಿನಮನೆ ಪಾರ್ವತಿ ಶೆಟ್ಟಿ, ಗೋಪಾಲಕೃಷ್ಣ ಶೆಟ್ಟಿ, ಬಿ.ರಾಜೀವ ಶೆಟ್ಟಿ, ಸಿಂಗಾರಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ, ಬಗ್ವಾಡಿ ಮೆತ್ತಿನಮನೆ ಕುಟುಂಬಸ್ಥರು, ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಷ್‌ಚಂದ್ರ ಶೆಟ್ಟಿ, ಸದಸ್ಯರಾದ ಅಶೋಕ್ ಪೂಜಾರಿ, ಶಿಕ್ಷಣ ಸಂಯೋಜಕ ಯೋಗೀಶ್, ಕ್ಷೇತ್ರ ಸಮನ್ವಯ ಅಧಿಕಾರಿ ಮಂಜುನಾಥ್ ನಾಯ್ಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ್ ಪುತ್ರನ್, ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿ‌ಅಂಗಡಿ, ಎಸ್.ಡಿ.ಎಂ.ಸಿ. ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ, ಸೂಲಿಯಣ್ಣ ಶೆಟ್ಟಿ, ಹಿರಿಯ ಪುರೋಹಿತರಾದ ನಾಗಪ್ಪಯ್ಯ ಭಟ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸತ್ಯವತಿ ವಂದಿಸಿದರು. ಸಹ ಶಿಕ್ಷಕಿ ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಜಯಂತಿ, ಶ್ವೇತಾ, ಹರ್ಷಿತ, ಸ್ವಾತಿ ಸಹಕರಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಅತ್ಯಂತ ಹಿರಿಯ ಹಳೆ ವಿದ್ಯಾರ್ಥಿ ಸುಮಾರು 94 ವರ್ಷ ಪ್ರಾಯದ ಬಗ್ವಾಡಿ ಮೆತ್ತಿನ ಮನೆ ವೆಂಕಮ್ಮ ರಾಮಣ್ಣ ಶೆಟ್ಟಿ ಕುಟುಂಬದ ಹಿರಿಯರು ಆದ ಶ್ರೀಮತಿ ಪಾರ್ವತಿ ಕುಶಲ ಶೆಟ್ಟಿಯವರು ತಮ್ಮ ಇಡೀ ಕುಟುಂಬದ ಪರವಾಗಿ ಶತಮಾನೋತ್ಸವ ಭವನಕ್ಕೆ 12 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿ ಪ್ರಥಮ ಕಂತಿನಲ್ಲಿ ರೂ. 6,50,000 ಲಕ್ಷದ ಚೆಕ್ಕನ್ನು ಶಾಲೆಗೆ ಹಸ್ತಾಂತರಿಸಿದರು.

(ಶತಮಾನೋತ್ಸವ ಭವನದ ನೀಲನಕಾಸೆ)

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!