spot_img
Thursday, December 5, 2024
spot_img

ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ| ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರ ಸೂಚನೆ

ಮಂಗಳೂರು, ಜುಲೈ 13: ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.
ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ  ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಾಮಗ್ರಿಗಳ ಬಗ್ಗೆ ಸ್ಥಳದಲ್ಲೇ ಇದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಆಹಾರ ಸಮಗ್ರಗಳ ಪ್ಯಾಕ್ ಮಾಡುವ ತೂಕವನ್ನು ಕೂಡ ಗಮನಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಎಲ್ಲ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಆಹಾರ ಸಾಮಗ್ರಿಗಳು ಕಳಪೆ ಇದ್ದಲ್ಲಿ  ಅಥವಾ ಯಾವುದೇ ಲೋಪದೋಷ ಇದ್ದಲ್ಲಿ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಇಲ್ಲವಾದರೆ ನೇರವಾಗಿ ತಮಗೆ ಪತ್ರ ಬರೆಯಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!