spot_img
Thursday, December 5, 2024
spot_img

ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸು, ನಮ್ಮೆಲ್ಲರ ಒಗ್ಗಟ್ಟಿನ ಪ್ರತೀಕ-ಎಂ ಮಹೇಶ್ ಹೆಗ್ಡೆ

ಕುಂದಾಪುರ: ಕನ್ನಡ ನಮ್ಮೆಲ್ಲರ ತಾಯ್ನುಡಿ. ಆದ್ದರಿಂದ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ಈ ತನ್ಮಧ್ಯೆ ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ ಹಾಗೂ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯ ಸಾಹಿತ್ಯದ ಮನಸ್ಸುಗಳೆಲ್ಲ ಜೊತೆಗೂಡಿ ತಾಲೂಕು ಸಾಹಿತ್ಯ ಸಮ್ಮೇಳನವನ್ನು ನಡೆಸುವ ಮೂಲಕ ನಮ್ಮ ತಾಯ್ನುಡಿಯ ಸೇವೆ ಮಾಡುವ ಸದವಕಾಶ ಸಿಕ್ಕಿರುವುದು ನಮ್ಮೆಲ್ಲರ ಯೋಗ ಭಾಗ್ಯ. ಆದ್ದರಿಂದ ಈ ಸಮ್ಮೇಳನವನ್ನು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಯಶಸ್ವೀ ಗೊಳಿಸೋಣ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಸಂಚಾಲಕರಾದ ಎಂ. ಮಹೇಶ್ ಹೆಗ್ಡೆ ಹೇಳಿದರು.

ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಅಗಸ್ಟ್ ತಿಂಗಳಲ್ಲಿ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಸಹಕಾರಿ ಧುರೀಣ ಮೊಳಹಳ್ಳಿ ಶಿವರಾವ್ ವೇದಿಕೆಯಲ್ಲಿ ನಡೆಸಲು ಉದ್ದೇಶಿಸಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಡಾಕ್ಟರ್ ಉಮೇಶ್ ಪುತ್ರನ್ ಸಮ್ಮೇಳನದ ರೂಪುರೇಷೆಯನ್ನು ತೆರೆದಿಟ್ಟರು. ಜಿಲ್ಲಾ ಘಟಕದ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿಯವರು ಸಮ್ಮೇಳನದ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸಮ್ಮೇಳನದ ಆರ್ಥಿಕ ಸಮಿತಿಯ ಸಂಚಾಲಕರಾದ ಅರುಣ್ ಕುಮಾರ್ ಹೆಗ್ಡೆ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಜಯಂತಿ ಶೆಟ್ಟಿ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ  ದೀಪಾ ಶೆಟ್ಟಿ, ಮೊಳಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಚೈತ್ರಾ ವಿ ಅಡಪ, ಗ್ರಾ. ಪಂ. ಸದಸ್ಯರಾದ ಮನೋಜ್ ಕುಮಾರ್ ಶೆಟ್ಟಿ, ಮಂಜುನಾಥ ಪೂಜಾರಿ, ಉದ್ಯಮಿಗಳಾದ ರಾಘವೇಂದ್ರ ಅಡಿಗ, ನರಾಡಿ ಬಾಲಕೃಷ್ಣ ಹೆಗ್ಡೆ, ಸಮಾಜ ಸೇವಕರಾದ ದೀನಪಾಲ ಶೆಟ್ಟಿ, ಲಯನ್ಸ್ ಕ್ಲಬ್ ನ ಮೋಹನ್ ದಾಸ್ ಶೆಟ್ಟಿ, ಶಂಕರ ಮೊಗವೀರ, ಶಿಕ್ಷಕರಾದ ಕರುಣಾಕರ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಜಯರಾಮ ಶೆಟ್ಟಿ, ಕಿರಣ್ ಕುಮಾರ್ ಬಿ, ಗೋವಿಂದ ಎಸ್, ಸತೀಶ್ ಶೆಟ್ಟಿಗಾರ್, ರಾಘು ತೆಕ್ಕಟ್ಟೆ, ಜಗದೀಶ್, ಮಹಾಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.
ತಾಲೂಕು ಘಟಕದ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಸಮ್ಮೇಳನದ ವಿವರವನ್ನು ತಿಳಿಸುವುದರ ಜೊತೆಗೆ, ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಿದರು. ಕಾರ್ಯದರ್ಶಿ ಅಕ್ಷತಾ ಗಿರೀಶ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!