Wednesday, September 11, 2024

ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ | ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಮೃತ್ಯು !

ಜನಪ್ರತಿನಿಧಿ (ಉಡುಪಿ) : ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (50) ಮೃತರು. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇವರ ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.

ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.

ಮೂರು ಅಂತಸ್ತಿನ ಮನೆಯೊಳಗಿನ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಬೆಳಗಿನ ಜಾವ 5.40ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು. ಬೆಂಕಿಯ ಕೆನ್ನಾಲಿಗೆಗೆ ಮನೆಯ ನೆಲಮಹಡಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!