Tuesday, October 8, 2024

ಅತಿಯಾದ ಆತ್ಮ ವಿಶ್ವಾಸವೇ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭರವಸೆಯನ್ನು ಹುಸಿಗೊಳಿಸಿದೆ : ಯೋಗಿ ಆದಿತ್ಯನಾಥ್‌

ಜನಪ್ರತಿನಿಧಿ (ಲಕ್ನೊ) : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯವಾಗಿ ಸೋತು ತೀವ್ರ ಮುಖಭಂಗ ಅನುಭವಿಸಿತ್ತು. ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿ ಸೋಲನುಭವಿಸಿತ್ತು.

ಲೋಕಸಭಾ ಚುನಾವಣೆಯಲ್ಲಿ ಅನುಭವಿಸಿದ ತೀವ್ರ ಮುಖಭಂಗ್ ನಂತರ ಉತ್ತರ ಪ್ರದೇಶ ಬಿಜೆಪಿ ಘಟಕ ಇದೇ ಮೊದಲ ಬಾರಿಗೆ ಸಭೆ ಕರೆದಿದ್ದು, ರಾಜ್ಯ ಬಿಜೆಪಿ ಘಟಕ ಕರೆದ ಪ್ರಮುಖ ಸಭೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅತಿಯಾದ ಆತ್ಮವಿಶ್ವಾಸ ಈ ವರ್ಷದ ಚುನಾವಣೆಯಲ್ಲಿ ಬಿಜೆಪಿಯ ಭರವಸೆಯನ್ನು ಹುಸಿಗೊಳಿಸಿದೆ ಎಂದು ಹೇಳಿದ್ದಾರೆ.

ಲಕ್ನೋದಲ್ಲಿ ಏರ್ಪಡಿಸಿದ್ದ ಬಿಜೆಪಿಯ ಯುಪಿ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಆದಿತ್ಯನಾಥ್, ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ತನ್ನ ಮತಗಳ ಪಾಲನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ, ಆದರೇ, ಈ ಬಾರಿ ಮತಗಳ ಪಲ್ಲಟ ಕಾಣುವುದಕ್ಕೆ ಸಾಧ್ಯವಿರಲಿಲ್ಲ. ಸೋತಿರಬಹುದು ಆದರೇ, ನಾವು ಮತ್ತೆ ಪುಟಿದೆದ್ದು ಬರುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಿಎಂ ಮೋದಿಯವರ ನಾಯಕತ್ವದಲ್ಲಿ ನಾವು ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಹೊಂದಿದ್ದೇವೆ, 2014, 2017, 2019 ಮತ್ತು 2022 ರಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದ್ದೇವೆ ಎನ್ನುವುದನ್ನು ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.

2014 ಮತ್ತು ನಂತರದ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿದ್ದ ಶೇಕಡವಾರು ಮತಗಳು, 2024ರಲ್ಲೂ ಬಿಜೆಪಿ ಅದೇ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ, ಆದರೆ ಮತಗಳ ಪಲ್ಲಟ ಮತ್ತು ಅತಿಯಾದ ಆತ್ಮವಿಶ್ವಾಸ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದರು.

ಏಳು ರಾಜ್ಯಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹೀನಾಯ ಪ್ರದರ್ಶನ ನೀಡಿದ ಒಂದು ದಿನದ ಬಳಿಕ ಆದಿತ್ಯನಾಥ್‌ ಯುಪಿ ರಾಜ್ಯ ಬಿಜೆಪಿ ಘಟಕದ ಸಭೆಯನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ.

ʼಇಂಡಿಯಾʼ ಮೈತ್ರಿಕೂಟಕ್ಕೆ ಉತ್ತೇಜನ ನೀಡುವಂತೆ, ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 10 ವಿಧಾನಸಭಾ ಕ್ಷೇತ್ರಗಳಿಗಳಲ್ಲಿ ʼಇಂಡಿಯಾʼ ಮೈತ್ರಿಕೂಟದ ಅಭ್ಯರ್ಥಿಗಳು ಗೆದ್ದಿದ್ದಾರೆ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ವಿಧಾನಸಭಾ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 33 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!