Saturday, September 14, 2024

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌ ನ್ಯಾಯಪೀಠ

ಜನಪ್ರತಿನಿಧಿ (ನವದೆಹಲಿ) : ಅಕ್ರಮ ಆಸ್ತಿ ಗಳಿಕೆ ಕೇಸ್ಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು(ಸೋಮವಾರ) ವಜಾಗೊಳಿಸಿ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಹಾಗೂ ಎಸ್ ಸಿ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿರುವುದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಅವರಿಗೆ ಈ ಸಂಬಂಧಿಸಿದಂತೆ ಹಿನ್ನಡೆಯಾಗಿದೆ.

ಇಂದು ಡಿಕೆಶಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ, ಹೈಕೋರ್ಟ್‌ ಆದೇಶದದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ವರ್ಷ ಅಕ್ಟೋಬರ್ 19, 2023ರಲ್ಲಿ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಡಿ ಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇನ್ನು ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (CBI) ಹೈಕೋರ್ಟ್ ನಿರ್ದೇಶನ ನೀಡಿದೆ.

ಏನಿದು ಪ್ರಕರಣ? : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪ ಹೊರಿಸಿತ್ತು.

2017ರಲ್ಲಿ ಶಿವಕುಮಾರ್ ಮನೆ ಮತ್ತು ಅವರಿಗೆ ಸಂಬಂಧಿಸಿದ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಅನ್ನು ಪ್ರಶ್ನಿಸಿ ಡಿಕೆಶಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!