spot_img
Tuesday, March 31, 2026
spot_img

ತಾಕತ್ತಿದ್ದರೇ, ಮುಡಾ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ : ವಿಜಯೇಂದ್ರ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೇ ಮುಡಾ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.

ಇಂದು(ಸೋಮವಾರ) ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಶಾಸಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ನ್ಯಾಯಾಂಗ ತನಿಖೆಯೆಂದು ನಾಟಕ‌ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹೊರಗೆ ನಾವು ಹೋರಾಟ ಮಾಡುತ್ತೇವೆ, ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು, ನಾವು ಸುಮ್ಮನೆ ಬಿಡುವುದಿಲ್ಲ ಎಂದು ಕಿಡಿ ಕಾರಿದರು.

ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ಸಿದ್ದರಾಮಯ್ಯನವರೇ ನೀವು ನೈತಿಕತೆ ‌ಕಳೆದುಕೊಂಡಿದ್ದೀರಿ. ನಾಗೇಂದ್ರ ಈಗಾಗಲೇ ಇಡಿ‌ ಕಸ್ಟಡಿಯಲ್ಲಿದ್ದಾರೆ, ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಸಿಎಂ ಇದಕ್ಕೆ ಉತ್ತರ ನೀಡಬೇಕು. ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಇನ್ನು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ ಅವರು,, ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಉತ್ತರ ಕೋಡಬೇಕು. ವಾಲ್ಮೀಕಿ ನಿಗಮದ ಬಗ್ಗೆ ನಿಳುವಳಿ‌ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೇಳುತ್ತೇವೆ. ಮುಡಾ ಹಗರಣ ಯಾರದೇ ಮೇಲೆ ಆರೋಪ ಇರಲಿ. ಸಿಬಿಐ ತನಿಖೆಗೆ ನೀಡಿ ಎಂದು ಒತ್ತಾಯ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!