spot_img
Tuesday, March 31, 2026
spot_img

ಎಮ್.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಳಿ-ಆಲೂರು ಶಾಲೆಗೆ ನೋಟ್ ಪುಸ್ತಕ, ಸಮವಸ್ತ್ರ ಕೊಡುಗೆ

ಆಲೂರು: ಬೈಂದೂರು ವಲಯದ ಆಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಳಿ-ಆಲೂರು ಇಲ್ಲಿಗೆ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ (ರಿ) ಚಿತ್ತೂರು ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕ ಮತ್ತು ಸಮವಸ್ತ್ರ ಇವುಗಳ ವಿತರಣಾ ಸಮಾರಂಭವು ಇತ್ತೀಚೆಗೆ ನಡೆಯಿತು.

ಆಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ರಾಜೇಶ ದೇವಾಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ (ರಿ) ಚಿತ್ತೂರು ಇದರ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಂಗನವಾಡಿ ಮತ್ತು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು. ಎಲ್.ಕೆ.ಜಿ.-ಯು.ಕೆ.ಜಿ. ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಡಾ ರಾಜೇಶ ಬಾಯರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಆಲೂರು ಗ್ರಾಮ ಪಂಚಾಯತ್‌ನ ಸದಸ್ಯರಾದ ಗಂಗೆ ಶೆಟ್ಟಿ ಹೊಸುಂದ, ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಕೃಷ್ಣ ಪೂಜಾರಿ ಸಾರದಮನೆ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುಂಡು ಪೂಜಾರಿ ಹರವರಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಯ್ಯ ಆಚಾರ್ಯ ಕಳಿ, ಶಾಲಾ ಎಸ್.ಡಿ.ಎಮ್.ಸಿ.ಯ ಉಪಾಧ್ಯಕ್ಷರಾದ ಶ್ರೀಲತಾ ಶೆಟ್ಟಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪೂಜಾರಿ, ಗೌರವ ಶಿಕ್ಷಕಿಯರಾದ ಪೂಜಾ ಮತ್ತು ಶ್ರೀಮತಿ ಸಹಕರಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಉದಯ ಕುಮಾರ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕರಾದ ಶಂಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!