Sunday, September 8, 2024

ಅಂಕೋಲ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ : ಐಆರ್‌ಬಿ ಸಂಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

ಜನಪ್ರತಿನಿಧಿ (ಅಂಕೋಲಾ): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಜರಿದ ಘಟನೆ ಸಂಭವಿಸಿದ ಬೆನ್ನಲ್ಲೇ ರಸ್ತೆ ಅಗಲೀಕರಣ ಕಾಮಗಾರಿ ನಡೆಸಿದ ಐಆರ್‌ಬಿ ರಸ್ತೆ ನಿರ್ಮಾಣ ಸಂಸ್ಥೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು- ಪಣಜಿ ರಾಷ್ಟ್ರೀಯ ಹೆದ್ದಾರಿ- 66 ಇದಾಗಿದ್ದು, ಇಲ್ಲಿ ಐಆರ್‌ಬಿ ಸಂಸ್ಥೆ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸಿತ್ತು. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಗುಡ್ಡವನ್ನು ಅಗೆದು ಹಾಗೇ ಬಿಡಲಾಗಿತ್ತು. ದೊಡ್ಡ ಗುಡ್ಡ ಅಗೆದಿದ್ದರಿಂದ ಭಾರೀ ಮಳೆಯಿಂದ ಸಡಿಲಗೊಂಡು ಕುಸಿದಿದೆ. ಇದರಿಂದ ಕೆಳ ಭಾಗದಲ್ಲಿದ್ದ ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಜಾರಿದ್ದು ಅಲ್ಲಿದ್ದ ಐವರು ಸಿಲುಕಿದ್ದರು ಎನ್ನಲಾಗಿದೆ.

ಅಲ್ಲೇ ಪಕ್ಕದಲ್ಲಿದ್ದ ಕ್ಯಾಂಟೀನ್‌ ಮೇಲೂ ಗುಡ್ಡ ಕುಸಿದಿರುವುದರಿಂದ ಕ್ಯಾಂಟೀನ್ ಸಮೇತ ಕುಸಿದು ಹೋಗಿದ್ದು ಅಲ್ಲಿದ್ದ ಇಬ್ಬರು ಟ್ಯಾಂಕರ್ ಸಿಬ್ಬಂದಿ ಮತ್ತು ಕ್ಯಾಂಟೀನಲ್ಲಿದ್ದ ಗಂಡ ಹೆಂಡತಿ ಮಣ್ಣಿನಡಿಗೆ ಸಿಲುಕಿದ್ದಾರೆ. ಮಣ್ಣಿನ ಕುಸಿತಕ್ಕೆ ಪಲ್ಟಿಯಾದ ಟ್ಯಾಂಕರ್ ಪಕ್ಕದಲ್ಲೇ ಹರಿಯುವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದೆ. ಟೀ ಸ್ಟಾಲ್ ನಡೆಸುತ್ತಿದ್ದ ವ್ಯಕ್ತಿ, ಆತನ ಪತ್ನಿ, ಮಗ ಸಾವನ್ನಪ್ಪಿದ್ದಾರೆ. ಜೊತೆಗೆ ಚಹಾ ಕುಡಿಯಲು ಬಂದಿದ್ದ ಚಾಲಕನೂ ಸಾವನ್ನಪ್ಪಿದ್ದಾನೆ. ಉಳಿದವರು ಎಷ್ಟು ಮಂದಿ ಇದ್ದಾರೆಂದು ಪತ್ತೆಯಾಗಿಲ್ಲ.

ಸ್ಥಳದಲ್ಲಿ ನೌಕಾಪಡೆ ಮತ್ತು ಇತರ ರಕ್ಷಣಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಐಆರ್‌ಬಿ ರಸ್ತೆ ನಿರ್ಮಾಣ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!