spot_img
Wednesday, January 22, 2025
spot_img

ಚಿನ್ನ ಕಳವು ಆರೋಪ : ಅವಿಮುಕ್ತೇಶ್ವರಾನಂದ ಸ್ವಾಮಿ ಅವರಲ್ಲಿ ಸಾಕ್ಷ್ಯಗಳಿದ್ದಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿ : ಕೇದಾರಾನಾಥ ದೇವಾಲಯ ಸಮಿತಿಯ ಅಧ್ಯಕ್ಷ ಸವಾಲು

ಜನಪ್ರತಿನಿಧಿ (ಕೇದಾರನಾಥ) : ಕೇದಾರನಾಥ ದೇವಾಸ್ಥಾನದಲ್ಲಿ ಸುಮಾರು 228 ಕೆ.ಜಿ ಚಿನ್ನವನ್ನು ಕಳುವು ಮಾಡಲಾಗಿದೆ ಎಂಬ ಜ್ಯೋತಿರ್ಮಠ ಶಂಕರಾಚಾರ್ಯ ಪೀಠದ ಅವಿಮುಕ್ತೇಶ್ವರಾನಂದ ಸ್ವಾಮಿ ಅವರ ಆರೋಪಕ್ಕೆ ಬದರಿ- ಕೇದಾರಾನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಸಂಸ್ಥೆ ಎಎನ್ಐ ಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅಜಯ್, ಕೇದಾರನಾಥ್ ಧಾಮ್ ನಿಂದ ಚಿನ್ನ ನಾಪತ್ತೆಯಾಗಿದೆ ಎಂಬ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಆರೋಪ ದುರದೃಷ್ಟಕರವಾದದ್ದು, ಅವರು ವಾಸ್ತವಾಂಶಗಳನ್ನು ಮುಂದಿಡಲಿ ಎಂದು ಸವಾಲು ಹಾಕಿದ್ದಾರೆ.

ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಕೇವಲ ಹೇಳಿಕೆ ನೀಡುವ ಬದಲು ಸಂಬಂಧಪಟ್ಟ ಪ್ರಾಧಿಕಾರವನ್ನು ಸಂಪರ್ಕಿಸಿ, ತಮ್ಮ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಲಿ ಅಥವಾ ಅವರ ಬಳಿ ಸಾಕ್ಷ್ಯಗಳಿದ್ದಲ್ಲಿ ಅವುಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್ ಮುಂದಿಡಲಿ ಎಂದು ಅವರು ತಾಕೀತು ಮಾಡಿದ್ದಾರೆ.

ಅವಿಮುಕ್ತೇಶ್ವರಾನಂದ ಸ್ವಾಮಿ ಅವರಿಗೆ ಕೇದಾರನಾಥ ಧಾಮದ ಘನತೆಗೆ ಧಕ್ಕೆ ತರುವ ಹಕ್ಕು ಇಲ್ಲ. ಅವರು ರಾಜಕೀಯ ಅಜೆಂಡಾವನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದರೆ ಅದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!