spot_img
Wednesday, April 1, 2026
spot_img

ಸೋಮೇಶ್ವರದ ಬಳಿ ಗುಡ್ಡ ಕುಸಿದರೆ ಅಧಿಕಾರಿಗಳೇ ಹೊಣೆ : ಗಂಟಿಹೊಳೆ

ತಕ್ಷಣವೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಖಡಿಕ್ ಸೂಚನೆ

ಜನಪ್ರತಿನಿಧಿ (ಬೈಂದೂರು) : ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ  ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.

ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು. ಈ ಬಗ್ಗೆ ಗಂಭೀರವಾಗಿ ಯೋಚಿಸಿ ಕ್ರಮಕ್ಕೆ ಸೂಚನೆಯನ್ನು ನೀಡಲಾಗಿತ್ತು. ಆದರೂ  ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಹೀಗಾಗುತ್ತಿದೆ.

ಸಂಬಂಧಪಟ್ಟವರ ಮೇಲೆ ಕ್ರಮ ಆಗಲಿ :
ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಕಾಮಗಾರಿಗೆ ಸಂಬಂಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಶಾಸಕರು ಎಚ್ಚರಿಸಿದ್ದಾರೆ.

ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು ಹಲವೆಡೆ ಮಳೆ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ದೊಂಬೆ ರಸ್ತೆಯನ್ನು ಅಧಿಕಾರಿಗಳು ಈ ಬಗೆಯಲ್ಲಿ ನಿರ್ಲಕ್ಷ್ಯ ಮಾಡಿವುದು ಯಾಕೆ ಎಂದು  ಶಾಸಕರು ಪ್ರಶ್ನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!