Saturday, September 14, 2024

ಶಿರೂರು ಗುಡ್ಡ ಕುಸಿತ | ಮಳೆ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತ | ಮಣ್ಣಿನಡಿ ಹಲವರು ಸಿಲುಕಿರುವ ಶಂಕೆ

ಜನಪ್ರತಿನಿಧಿ (ಶಿರೂರು) : ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಘಟಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ(ಬುಧವಾರ) ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ.

ಇನ್ನೂ, ಗುಡ್ಡ ಕುಸಿಯುತ್ತಲೆ ಇದೆ ಎಂಬ ಮಾಹಿತಿ ಇದೆ, ಇದು NDRI ಹಾಗೂ ಇತರ ರಕ್ಷಣಾ ಸಿಬ್ಬಂದಿಗೆ ಅಪಾಯವನ್ನುಂಟುಮಾಡುವ ಸಾಧ್ಯತೆಯಿದ. “ಭಾರೀ ಮಳೆಯು ಭೂಕುಸಿತಗಳನ್ನು ಉಂಟುಮಾಡುತ್ತಿದೆ ಮತ್ತು ಕಾರ್ಯಾಚರಣೆಯನ್ನು ಮುಂದುವರಿಸಲು ನಾವು ರಕ್ಷಣಾ ಸಿಬ್ಬಂದಿಯನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಕಾರ್ಯ ಮೇಲ್ವಿಚಾರಣೆ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಟ್ಟದ ಬಳಿ ಜನರು ಹೋಗದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚತುಷ್ಪಥ ಹೆದ್ದಾರಿಯಲ್ಲಿ ಸಿಲುಕಿದ ಗುಡ್ಡದ ಮಣ್ಣು ಗಂಗವಳ್ಳಿ ನದಿಗೆ ಜಾರಿದೆ. ಕೆಸರು ನದಿಗೆ ಶವಗಳನ್ನು ಸಾಗಿಸಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ. ಇದುವರೆಗೆ ನಾಲ್ಕು ಶವಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು, ಮಂಗಳವಾರ ಸಂಜೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಆದರೆ, ಮಳೆಯಿಂದಾಗಿ ಕೆಲ ಗಂಟೆಗಳ ನಂತರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಬೆಳಗ್ಗೆ ಕಾರ್ಯಾಚರಣೆ ಪುನರಾರಂಭವಾದರೂ 9 ಗಂಟೆಯ ನಂತರ ಕಾರ್ಯಾಚರಣೆ ನಿಲ್ಲಿಸಲಾಯಿತು. ಮಳೆಯ ಅಬ್ಬರ ಜೋರಾಗಿದ್ದು, ಹೆದ್ದಾರಿಯಲ್ಲಿನ ಮಣ್ಣು ತೆರವು ಕಾರ್ಯವನ್ನು ಸ್ಥಗಿತಗೊಳಿಸಬೇಕಾಯಿತು. ಶಿರೂರಿನಲ್ಲಿ NH-66 ರ ಅವಶೇಷಗಳನ್ನು ತೆರವುಗೊಳಿಸುವ ಕೆಲಸವನ್ನು ಮಳೆಯಿಂದಾಗಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ, ಗುಡ್ಡದ ಮೇಲೆ ನಿರಂತರವಾಗಿ ನೀರು ಹರಿಯುತ್ತಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಕಾರ್ಯಾಚರಣೆ ಮುಂದುವರಿಸುವುದು ಅಸಾಧ್ಯವಾಗಿದೆ. ಭೂಕುಸಿತ ಸಂಭವಿಸಿದ ಹಲವೆಡೆ ಬಿರುಕು ಬಿಟ್ಟಿವೆ. ನಾವು ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲವೆಂದು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ಜನರು ಅವಶೇಷಗಳ ಅಡಿಯಲ್ಲಿದ್ದಾರೆ ಎಂದು ಅವರು ಹೇಳಿದರು. ದುರಂತಕ್ಕೆ ಕಾರಣವಾದ ಅವೈಜ್ಞಾನಿಕ ರಸ್ತೆ ಕಾಮಗಾರಿಯ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಹೇಳಿದರು. “ಶೋಧನೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಅವರು ಹೇಳಿದರು. ಏತನ್ಮಧ್ಯೆ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆಯ ತಂಡವು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇಂದೂ ಮಳೆ ಮುಂದುವರಿದಿದ್ದು, ಕಾರ್ಯಾಚರಣೆಗೆ ಮತ್ತೆ ಅಡಚಣೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!