Thursday, November 14, 2024

ಬಿದ್ಕಲ್‍ಕಟ್ಟೆಯಲ್ಲಿ ಆ.31, ಸೆ.1ರಂದು ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ: ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಅಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಬಿದ್ಕಲ್‍ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ಸಹಕಾರಿ ಧುರೀಣ ಮೊಳಹಳ್ಳಿ ಶಿವರಾವ್ ವೇದಿಕೆಯಲ್ಲಿ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ ಪುತ್ರನ್ ಹೇಳಿದರು.

ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಆ.31ರ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸೆ.1ರಂದು ಬೆಳಿಗ್ಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿವಿಧ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಕುಂದಾಪುರ ಭಾಷೆ, ಸಂಸ್ಕತಿಗೆ ಸಂಬಂಧಪಟ್ಟಂತೆ ಒತ್ತು ನೀಡುವ ಭೌಗೋಳಿಕ ಪ್ರದೇಶದ ಪ್ರಾತಿನಿಧಿಕವಾಗಿ, ವಿವಿಧತೆಯಲ್ಲಿ ಏಕತೆಯನ್ನು ತರುವ ನೂತನ ಕಾರ್ಯಕ್ರಮವಾಗಿ ಈ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.

ಇದು ನಮ್ಮ ಅವಧಿಯಲ್ಲಿ ನಡೆಯುತ್ತಿರುವ ಮೂರನೇ ಸಮ್ಮೇಳನವಾಗಿದ್ದು, ಬಿದ್ಕಲ್‍ಕಟ್ಟೆಯಲ್ಲಿ ತಾಲೂಕು ಸಮ್ಮೇಳನ ನಡೆಯುತ್ತಿರುವುದಕ್ಕೆ ಪರಿಸರದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ. ಅಲ್ಲಿನ ಜನರ ಆಸಕ್ತಿ ಗಮನಿಸಿದರೆ ಈ ಸಮ್ಮೇಳನ ಅತ್ಯಂತ ಯಶಸ್ವಿ ಸಮ್ಮೇಳನ ಆಗಿ ಮೂಡಿಬರಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿಯವರನ್ನು ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2019ರಲ್ಲಿ ವಯೋ ನಿವೃತ್ತರಾದವರು. ಇವರು ಕನ್ನಡಕ್ಕೆ ತನ್ನದೆಯಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈ ಸಮ್ಮೇಳನದಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ.100 ಫಲಿತಾಂಶ ಪಡೆದ ಸರ್ಕಾರಿ ಶಾಲೆಗಳನ್ನು ಗೌರವಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ ಅವರು, ಕಳೆದ ವರ್ಷ ಕುಂದಾಪುರ ಘಟಕದ ನೇತೃತ್ವದಲ್ಲಿ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಮಾಡಲಾಗಿದೆ. ಕಳೆದ ವರ್ಷದಿಂದ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಜಿಲ್ಲಾ ಸಮ್ಮೇಳನಕ್ಕೆ ಮಾತ್ರ ಬರುತ್ತಿದೆ. ಹಾಗಾಗಿ ತಾಲೂಕು ಸಮ್ಮೇಳನಗಳಿಗೆ ಸಂಪನ್ಮೂಲ ಕ್ರೋಡೀಕರಣ ಕಷ್ಟವಾಗುತ್ತಿದೆ. ಕಳದ ಬಾರಿ ಜಿಲ್ಲೆಯ 4 ತಾಲೂಕು ಸಮ್ಮೇಳನಗಳು ಆಗಿವೆ. ಎಂದರು.

ತಾಲೂಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಮಹೇಶ ಹೆಗ್ಡೆ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೆ ಎರಡು ಪೂರ್ವಭಾವಿ ಸಭೆಗಳನ್ನು ನೆಡೆಸಿದ್ದೇವೆ. ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಿದ್ಕಲ್ ಕಟ್ಟೆಯಲ್ಲಿ ಯಶಸ್ವಿ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಆರ್ಥಿಕ ಸಮಿತಿ ಅಧ್ಯಕ್ಷರಾದ ಅರುಣ್ ಕುಮಾರ್ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಘಟಕದ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಉಪಸ್ಥಿತರಿದ್ದರು.

ಸಮ್ಮೇಳನ ಸರ್ವಾಧ್ಯಕ್ಷರ ಪರಿಚಯ: ಪ್ರೊ.ಎಂ ಬಾಲಕೃಷ್ಣ ಶೆಟ್ಟಿ ಅವರ ಹುಟ್ಟೂರು ಕುಂದಾಪುರ ತಾಲೂಕು ಮೊಳಹಳ್ಳಿ. ಅವರು 1985 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದು 1985 ರಿಂದ 88 ರವರೆಗೆ ಭಂಡಾರ್ಕಾರ್ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿ ಅನಂತರ 1988 ರಲ್ಲಿ ಕಟೀಲು ಡಿಗ್ರಿ ಕಾಲೇಜಿಗೆ ಉಪನ್ಯಾಸಕನಾಗಿ ಸೇವೆಗೆ ಸೇರಿರುತ್ತೇನೆ. 2004 ರಲ್ಲಿ ಅದೇ ಕಾಲೇಜಿನ ಪ್ರಾಂಶುಪಾಲನಾಗಿ ಭಡ್ತಿ ಹೊಂದಿದರು. 2019 ರಲ್ಲಿ ಕಾಲೇಜಿನಿಂದ ವಯೋ ನಿವೃತ್ತಿ ಯಾಗಿರುವ ಇವರು 2019 ರಲ್ಲಿ ಮಂಗಳೂರು ಶ್ರೀ ರಾಮಕೃಷ್ಣ ಡಿಗ್ರಿ ಕಾಲೇಜಿಗೆ ಪ್ರಾಂಶುಪಾಲರಾಗಿ ಹಾಗೂ ಶ್ರೀ ರಾಮಕೃಷ್ಣ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂದಿಕೇಟ್ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ BOS, BOE ಮಂಡಳಿಯ ಸದಸ್ಯರಾಗಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯ ಸಂಪನ್ಮೂಲ ವ್ಯಕ್ತಿಯಾಗಿ ಹಲವು ಉನ್ನತ ಅಧಿಕಾರಿಗಳಿಗೆ ಆಡಳಿತ ಕನ್ನಡ ತರಬೇತಿ ನೀಡಿರುವ ಇವರು, ಟಿ.ವಿ ಮತ್ತು ಆಕಾಶವಾಣಿ ಕಲಾವಿದ ಯಕ್ಷಗಾನಕ್ಕೆ ಸಂಬಂಧಿಸಿದ ಬಲ್ಲಿರೇನಯ್ಯ ಕಾರ್ಯಕ್ರಮ ನಿರಂತರ ಎರಡು ವರ್ಷ ನೀಡಿದ್ದಾರೆ. ನಿರಂತರವಾಗಿ ಚಿಂತನ ಕಾರ್ಯಕ್ರಮ ಆಕಾಶವಾಣಿಯಲ್ಲಿ ಪ್ರಸಾರಗೊಳ್ಳುತ್ತಾ ಬಂದಿದೆ. ತಾಲೂಕು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ. ಇವರಿಗೆ ಬಂಟರ ಮಾತೃ ಸಂಘದ ವತಿಯಿಂದ ಉತ್ತಮ ಶಿಕ್ಷಕ ಚಿನ್ನದ ಪದಕದೊಂದಿಗೆ ಸನ್ಮಾನ. ಬೆಂಗಳೂರು ಕುಂದಾಪುರ ಹಾಗೂ ಹುಟ್ಟೂರಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ. ದುಬೈ ಬಂಟರ ಸಂಘದಿಂದ ಬಂಟ ವಿಭೂಷಣ ಪ್ರಶಸ್ತಿ ಲಭಿಸಿದೆ.

ಟೀಚರ್ಸ್ ಕೋ ಅಪರೇಟಿವ್ ಬ್ಯಾಂಕ್ ನ ನಿಕಟಪೂರ್ವ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯ, ದುಬಾಯಿ, ಕುವೈಟ್, ಬಾಂಬೆ, ಬೆಂಗಳೂರು ಮೊದಲಾದ ಕಡೆ ವಿಶೇಷ ಉಪನ್ಯಾಸಕನಾಗಿ ಭಾಗವಹಿಸಿದ್ದಾರೆ. ನಾಟಕ ಮತ್ತು ಯಕ್ಷಗಾನದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರ ಹಲವು ಬಿಡಿ ಲೇಖನಗಳು ವಾರ ಮತ್ತು ಮಾಸ ಪತ್ರಿಕೆಗಳಲ್ಲೂ ಪ್ರಕಟಗೊಂಡಿವೆ. ಪತ್ನಿ ಶ್ರೀಮತಿ ವೀಣಾ ಮಕ್ಕಳು ಭೂಷಣ್ ಮತ್ತು ಭುವನ್ ಇಬ್ಬರು ಎಂಜಿನೀಯರ್ ಪದವಿ ಮುಗಿಸಿ ದುಬೈಯಲ್ಲಿ ಉದ್ಯೋಗದಲ್ಲಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!