Wednesday, September 11, 2024

ಸಕಲೇಶಪುರ : ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ

ಜನಪ್ರತಿನಿಧಿ (ಸಕಲೇಶಪುರ) : ಕಳೆದೊಂದೆರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದು (ಗುರುವಾರ) ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮೇಲೆ ಬಿದ್ದಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಭಾರಿ ಮಳೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

KA-17 M 5003 ನಂಬರ್‌ನ ಓಮಿನಿ ಕಾರು ಮಣ್ಣಿನಡಿ ಸಿಲುಕಿದೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಮಾಹಿತಿ ಇದೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಗುಡ್ಡ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿದೆ.

ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಖಿಲೇಶ್ ಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುಡ್ಡ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾಗಿದೆ.

ಹಾಸನದ ಕಂದಲಿ ಗ್ರಾಮದ ಬಳಿಯೇ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ ರಸ್ತೆಯಲ್ಲೂ ಪ್ರಯಾಣ ದುಸ್ತರವಾಗಿದ್ದು, ಹಾಸನ ಬಳಿಯೇ ವಾಹನ ನಿಲ್ಲಿಸಲು ಪೊಲೀಸರು ಸೂಚನೆ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!