spot_img
Thursday, December 5, 2024
spot_img

ಶಿರೂರು ಗುಡ್ಡ ಕುಸಿತ : ಮತ್ತೊಂದು ಮೃತದೇಹ ಪತ್ತೆ | ಇತ್ತ ಚಿಕ್ಕಮಗಳೂರಿನ ಸೀತಾಲಯನಗಿರಿ-ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ವಾಹನ ಸಂಚಾರ ನಿಷೇಧ

ಜನಪ್ರತಿನಿಧಿ (ಶಿರೂರು) : ಕಳೆದೊಂದೆರಡು ವಾರಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದ ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಇಂದು(ಗುರುವಾರ) ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳವಾರ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ, ತುರ್ತು ಸೇವೆಗಳು ಮತ್ತು ಇತರ ಏಜೆನ್ಸಿಗಳ ಅಧಿಕಾರಿಗಳು ಮಳೆಯ ನಡುವೆ ತೀವ್ರವಾದ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ಬಳಿಕ ಮಂಗಳವಾರ ಸಂಜೆಯ ವೇಳೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧೀಕ್ಷಕ (ಕಾರವಾರ) ನಾರಾಯಣ ಎಂ, ಘಟನೆ ಸಂಭವಿಸಿದಾಗಿಂದ ಮೃತದೇಹಗಳ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎಲ್ಲಾ ಏಜೆನ್ಸಿಗಳ ಸಹಾಯದಿಂದ ನಾವು ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ತಿಳಿಸಿದ್ದಾರೆ.

ಮೃತ ನಾಲ್ವರಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು  ಲಕ್ಷ್ಮಣ್ ನಾಯ್ಕ್(47 ವ), ಶಾಂತಿ ನಾಯ್ಕ್ (36 ವ) ಮತ್ತು ಅವರ ಮಕ್ಕಳಾದ ರೋಷನ್ (11 ವ), ಆವಂತಿಕಾ (6 ವ) ಎಂದು ಗುರುತಿಸಲಾಗಿದೆ. ಮೃತ ಇನ್ನಿಬ್ಬರನ್ನು ಚಾಲಕರು ಎಂದು ಗುರುತಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಏಳು ಮಂದಿ ಗುಡ್ಡ ಕುಸಿತದ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಪೈಕಿ ಇದುವರೆಗೆ ಆರು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದ ಒಂದು ಮೃತದೇಹದ ಪತ್ತೆ ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈತನ್ಮಧ್ಯೆ, ಜೋರು ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಮೇಲ್ಮೈಗೆ ತೀವ್ರ ಹಾನಿಯಾಗಿರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಸೀತಾಲಯನಗಿರಿ-ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಜುಲೈ 22ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!