spot_img
Wednesday, April 1, 2026
spot_img

ಮುಂದುವರಿದ ಮಳೆ : ನಾಳೆ (ಜುಲೈ 19) ಉಡುಪಿ ಜಿಲ್ಲೆಯಾದ್ಯಂತ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ನಾಳೆ (ಶುಕ್ರವಾರ, ಜುಲೈ 19) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದು(ಗುರುವಾರ) ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡುವಿಲ್ಲದೆ ಸುರಿಯುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ನೆರೆ ಬಂದಿದ್ದು ಜನಜೀವನ ಹೈರಾಣಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ (ಶುಕ್ರವಾರ)ವೂ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಪುಷ್ಯ ಮಳೆ ಆರಂಭವಾಗಲಿದೆ, ಮಳೆ ಮತ್ತೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!