spot_img
Friday, January 17, 2025
spot_img

ʼಸುಪ್ರೀಂʼ ಆದೇಶದ ಮೇರೆಗೆ ವಿವಾದಿತ NEET-UG ಪರೀಕ್ಷೆ ಫಲಿತಾಂಶ ಪ್ರಕಟಗೊಳಿಸಿದ ಎನ್‌ಟಿಎ

ಜನಪ್ರತಿನಿಧಿ (ನವದೆಹಲಿ) : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಎನ್ಇಇಟಿ-ಯುಜಿ ಪರೀಕ್ಷೆಯ ಫಲಿತಾಂಶವನ್ನು ಇಂದು(ಶನಿವಾರ) ಕೇಂದ್ರವಾರು ಹಾಗೂ ನಗರವಾರು ಪ್ರಕಟ ಮಾಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ಪ್ರಕ್ರಿಯೆಗಳಲ್ಲಿ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಎನ್ಇಇಟಿ-ಯುಜಿ ಪರೀಕ್ಷೆ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವರ ಮೇಲೆ ಪ್ರತಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದವು. ವಿದ್ಯಾರ್ಥಿಗಳು ಕೂಡ ಎನ್‌ಟಿಎ ಹಾಗೂ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ದೇಶದಾದ್ಯಂತ ಪ್ರತಿಭಟಿಸಿದ್ದರು.

ಸದ್ಯ, ಈ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದ್ದು, ಇಂದು (ಶನಿವಾರ) ಮಧ್ಯಾಹ್ನ ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ NTA ಗೆ ಸೂಚನೆ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಈಗ ಫಲಿತಾಂಶ ಪ್ರಕಟಗೊಂಡಿದೆ.

ಮೇ.05 ರಂದು 14 ವಿದೇಶದಲ್ಲಿರುವ ನಗರಗಳು ಒಳಗೊಂಡು ಒಟ್ಟು 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ ಸುಮಾರು 24 ಲಕ್ಷ ಪರೀಕ್ಷಾರ್ಥಿಗಳು ಪರೀಕ್ಷೆ ಬರೆದಿದ್ದರು.

ಆಕಾಂಕ್ಷಿಗಳ ಗುರುತನ್ನು ಮರೆಮಾಚುವ ಮೂಲಕ ಫಲಿತಾಂಶಗಳನ್ನು ಪ್ರಕಟಿಸಲು ನ್ಯಾಯಾಲಯವು ಆದೇಶ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕೇಂದ್ರಗಳಲ್ಲಿ ಹಾಜರಾಗುವ ಅಭ್ಯರ್ಥಿಗಳು ಬೇರೆಡೆ ಪರೀಕ್ಷೆ ಬರೆಯುವವರಿಗಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಬಯಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ದೇಶದ ಪ್ರತಿಷ್ಠಿತ ಪರೀಕ್ಷೆಯೊಂದರಲ್ಲಿ ದೊಡ್ಡ ಮಟ್ಟದ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದತಿ, ಮರು ಪರೀಕ್ಷೆ ಹಾಗೂ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ವಾದವನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ಪುನರಾರಂಭಿಸಲಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!