Sunday, September 8, 2024

ಸ್ಟಾಫ್‌ ಸೆಲೆಕ್ಷನ್ ಕಮಿಷನ್‌ ನೇಮಕಾತಿ : 17,727 ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನ

ಜನಪ್ರತಿನಿಧಿ (ಬೆಂಗಳೂರು) : ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಮತ್ತು ಸಂಸ್ಥೆಗಳಲ್ಲಿನ ಗ್ರೂಪ್ ಎ, ಬಿ ಹಂತದ ಹಾಗೂ ಇನ್‌ಸ್ಪೆಕ್ಟ‌ರ್, ಹಿರಿಯ ಸಹಾಯಕ ಹಂತದ ಸುಮಾರು 17,727 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೇ ನಡೆಯುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಎಸ್‌ಎಸ್‌ಸಿ(ಸ್ಟಾಫ್‌ ಸೆಲೆಕ್ಷನ್ ಕಮಿಷನ್) ಅರ್ಜಿ ಆಹ್ವಾನ ಮಾಡಿದೆ.

ಸರ್ಕಾರದ ಮಾನ್ಯತೆ ಹೊಂದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದು ತೇರ್ಗಡೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದೇ, ಜುಲೈ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ ?
ಸಂಯೋಜಿತ ಪದವಿ ಮಟ್ಟದ ಪರೀಕ್ಷೆ ಮೂಲಕ ನೇಮಕಾತಿ ನಡೆಯುತ್ತದೆ. ಇನ್ನೂ ಹೆಚ್ಚಿನ ವಿವರವಾದ ಅಧಿಸೂಚನೆಗೆ https://ssc.gov.in/ ವೆಬ್‌ಸೈಟ್ ಪರಿಶೀಲಿಸಬಹುದಾಗಿದೆ.

ಇಂಗ್ಲಿಷ್, ಹಿಂದಿ ಮತ್ತು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಉಡುಪಿ ಮತ್ತೆ ಶಿವಮೊಗ್ಗಗಳಲ್ಲಿ ತೆರೆಯುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!