Sunday, October 13, 2024

ಜು.22:ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಜುಲೈ 22 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ
ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ
ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್
ಪೊಲ್ಯ, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾಲೇಜಿನ ಕಲಾ ನಿಕಾಯದ ಡೀನ್ ಪ್ರೊ. ನಿಕೇತನಾ ಭಾಗವಹಿಸಲಿದ್ದು, ಹಿರಿಯ ವರದಿಗಾರರಾದ ಬಿ.ಬಿ ಶೆಟ್ಟಿಗಾರ್ ಅವರಿಗೆ ಪತ್ರಿಕಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಗುವುದು. ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯಾ ನಾಗರಾಜ್ ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!