Sunday, September 8, 2024

ಹಿರಿಯ ಪತ್ರಕರ್ತ ಶಶಿಧರ್‌ ಭಟ್‌ ಅನಾರೋಗ್ಯ : ಚಿಕಿತ್ಸೆಯ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕಿಡ್ನಿ ವೈಫಲ್ಯದಿಂದ ಅನಾರೋಗ್ಯಕಕ್ಕೊಳಗಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ‘ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಶಶಿಧರ್‌ ಭಟ್‌ ಚಿಕಿತ್ಸೆ ಸರ್ಕಾರವೇ ಭರಿಸಲಿದೆ : ಸಿಎಂ ಸಿದ್ದರಾಮಯ್ಯ ಘೋಷಣೆ (‌ಸಿಎಂ ʼಎಕ್ಸ್‌ʼ ಪೋಸ್ಟ್)

ಈ ಘಳಿಗೆಯಲ್ಲಿ ಯಾರೈ ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದ ಶಶಿಧರ್‌ ಭಟ್‌ !

ಅನಾರೋಗ್ಯಕ್ಕೆ ಒಳಗಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಭಟ್, ‘ಆಸ್ಪತ್ರೆಯ ಬೆಡ್‌ ಮೇಲಿಂದನೇ ಸಾಮಾಜಿಕ ಜಾಲತಾಣ ಫೇಸ್‌ ಬುಕ್ ನಲ್ಲಿ ಪೋಸ್ಟ್‌ ಮಾಡಿ, “ನಾನು ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿದ್ದೇನೆ. ಈ ಘಳಿಗೆಯಲ್ಲಿ ಯಾರು ನನ್ನವರಲ್ಲ ಎಂಬುದು ಅರ್ಥವಾಗುತ್ತಿದೆ. ಧನ್ಯವಾದಗಳು ”ಎಂದು ಅಳಲು ತೋಡಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರ ಅಪಾಯ ಬಂಧು ಬಳಗವು ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು. ಈಗ ಸ್ವತಃ ಮುಖ್ಯಮಂತ್ರಿಗಳೇ ಅವರ ಚಿಕಿತ್ಸೆಯ ಸಂಪೂರ್ಣ ಖರ್ಚು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!