spot_img
Saturday, December 7, 2024
spot_img

ಸಂಸತ್‌ ಬಜೆಟ್‌ ಅಧಿವೇಶನ | ಈ ಬಜೆಟ್ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ : ಪಿಎಂ ಮೋದಿ

ಜನಪ್ರತಿನಿಧಿ (ನವದೆಹಲಿ) :  ನಾಳೆ (ಮಂಗಳವಾರ) ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ  ಇಂದು(ಸೋಮವಾರ) ಹೇಳಿದ್ದಾರೆ.

ಇಂದಿನಿಂದ ಸಂಸತ್ತಿನ ಲೋಕಸಭಾ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಲೋಕಸಭೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ದೇಶದ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಸದನದ ಕಲಾಪ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಇಡೀ ದೇಶವು ಕಾತುರದಿಂದ ಎದುರು ನೋಡುತ್ತಿದೆ. 60 ವರ್ಷಗಳ ಬಳಿಕ ಮೂರನೇ ಬಾರಿಗೆ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಹಾಗೂ ಮೂರನೇ ಬಾರಿಗೆ ಬಜೆಟ್ ಮಂಡಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ನಾಳೆ(ಮಂಗಳವಾರ) ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ. ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ. ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಬಜೆಟ್ ಅಮೃತ ಕಾಲಕ್ಕೆ ಮಹತ್ವದ ಬಜೆಟ್. ಈ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ತಿಳಿಸಿದರು.

ನಾವು ಜನವರಿಯಿಂದ ಇಲ್ಲಿಯವರೆಗೆ ಎಷ್ಟು ಹೋರಾಡಬೇಕೋ ಅಷ್ಟು ಹೋರಾಟ ಮಾಡಿದ್ದೇವೆ, ಆದರೆ, ಈಗ ಆ ಅವಧಿ ಮುಗಿದಿದೆ, ಜನತೆ ತೀರ್ಪು ನೀಡಿದೆ. ಎಲ್ಲಾ ಸಂಸದರು ಪಕ್ಷಗಳನ್ನು ಮೀರಿ ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುಂತೆ ಮತ್ತು ಮುಂದಿನ 4.5 ವರ್ಷಗಳ ಕಾಲ ಸಂಸತ್ತಿನ ಈ ಗೌರವಾನ್ವಿತ ವೇದಿಕೆಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. 2029 ರ ಚುನಾವಣಾ ವರ್ಷದಲ್ಲಿ ನೀವು ಯಾವುದೇ ರಾಜಕೀಯ ಆಟ ಆಡಬಹುದು. ಆದರೆ, ಪ್ರಸ್ತುತ ರೈತರು, ಯುವಕರು ಮತ್ತು ದೇಶದ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸಿ.

ಸಂಸತ್ತಿನ ಮೊದಲ ಅಧಿವೇಶನದಲ್ಲಿ ದೇಶದ 140 ಕೋಟಿ ಜನರಿಂದ ಬಹುಮತದಿಂದ ಆಯ್ಕೆಯಾಗಿರುವ ಸರ್ಕಾರದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿರುವುದನ್ನು ನೀವು ನೋಡಿದ್ದೀರಿ. 2.5 ಗಂಟೆಗಳ ಕಾಲ ಪ್ರಧಾನಿಮಂತ್ರಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ ಕೂಡ ನಡೆದಿದೆ. ಜನತೆ ನಮ್ಮನ್ನು ದೇಶದ ಕಾರ್ಯಕ್ಕಾಗಿ ಕಳುಹಿಸಿದ್ದಾರೆಯೇ ಹೊರತು ಪಕ್ಷಕ್ಕಾಗಿ ಅಲ್ಲ. ಈ ಸಂಸತ್ತು ದೇಶಕ್ಕಾಗಿ, ಪಕ್ಷಕ್ಕಾಗಿ ಅಲ್ಲ ಎಂದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರವರೆಗೆ ನಡೆಯಲಿದೆ. ಕೇಂದ್ರವು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸುವುದು ಸೇರಿದಂತೆ ಆರು ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಸಂಸತ್ತಿನ ಅನುಮೋದನೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದು,  ನಾಳೆ(ಮಂಗಳವಾರ, ಜುಲೈ. 23) ಬಜೆಟ್ ಮಂಡಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!