Sunday, September 8, 2024

ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಅವಕಾಶ : ಮೋದಿ ನೇತೃತ್ವದ ಸರ್ಕಾರದ ಕ್ರಮವನ್ನು ಸ್ವಾಗತಿಸಿದ RSS

ಜನಪ್ರತಿನಿಧಿ (ನವದೆಹಲಿ) : ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲೆ ಹೇರಿದ್ದ ನಿರ್ಬಂಧವನ್ನು ಮೋದಿ ನೇತೃತ್ವದ ಸರ್ಕಾರ ತೆಗೆದಿದ್ದು, ಕೇಂದ್ರ ಸರ್ಕಾರದ ಈ ಕ್ರಮವನ್ನು ಆರ್‌ಎಸ್‌ಎಸ್ ಇಂದು (ಸೋಮವಾರ) ಪ್ರಶಂಸಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಈ ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಮೇಲೆ ನಿಷೇಧ ಹೇರುವ ಮೂಲಕ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಂಡಿವೆ ಎಂದು ಸಂಘ ಆರೋಪಿಸಿದೆ.

ಈ ಹಿಂದೆಯೂ ಸರ್ಕಾರ, ತನ್ನ ನೌಕರರು ಆರ್‌ಎಸ್‌ಎಸ್‌ ಸಹವಾಸ ಮಾಡುವುದನ್ನು ನಿರ್ಬಂಧಿಸಿದ ಹಲವು ನಿದರ್ಶನಗಳಿವೆ. ಸರ್ಕಾರ ನೌಕರರ ಮೇಲಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶ ಪ್ರಕಟಿಸಿದ ಒಂದು ದಿನದ ಬಳಿಕ ಆರ್ ಎಸ್ಎಸ್ ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಿಸಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ಹಲವು ವಿಪಕ್ಷ ನಾಯಕರು ಟೀಕಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ RSS ವಕ್ತಾರ ಸುನೀಲ್ ಅಂಬೇಕರ್, “ಸರ್ಕಾರದ ಪ್ರಸ್ತುತ ನಿರ್ಧಾರವು ಸೂಕ್ತವಾಗಿದೆ ಹಾಗೂ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ. “ರಾಷ್ಟ್ರೀಯ ಸ್ವಯಂಸೇವಕ ಸಂಘ ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ನಿರ್ಮಾಣ ಹಾಗೂ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ” ಎಂದು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!