Saturday, October 12, 2024

ಇಡಿ ಅಧಿಕಾರಿಗಳ ನಡೆಗೆ ಕಾಂಗ್ರೆಸ್‌ ಖಂಡನೆ : ಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಜನಪ್ರತಿನಿಧಿ  (ಬೆಂಗಳೂರು) : ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ರಾಜ್ಯ ಕಾಂಗ್ರೆಸ್, ಇಡಿ ಅಧಿಕಾರಿಗಳ ಬಂಧಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಮಂಗಳವಾರ) ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಎಂಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗೆಸ್ ಸಚಿವರು, ಶಾಸಕರು ಧರಣಿ ನಡೆಸಿದ್ದು, ಇಡಿ, ಸಿಬಿಐ ವಿರುದ್ಧ ಘೋಷಣೆ ಕೂಗಿದ್ದಾರೆ.

ಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಿರುಕುಳ ನೀಡುತ್ತಿರುವ ಇಡಿ ಅಧಿಕಾರಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

Karnataka Congress including Chief Minister Siddaramaiah and State Home Minister G Parameshwara hold protests at Gandhi statue outside Vidhan Soudha against alleged arbitrary actions taken by ED officials.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!