Sunday, September 8, 2024

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ

ಕುಂದಾಪುರ: ಕುಂದಾಪುರದ ಮೊಗವೀರ ಭವನದಲ್ಲಿ ಸೋಮವಾರ ಜರುಗಿದ  ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ  ‘ಜನತಾ ನವನೀತ-2024’ ಅತ್ಯಂತ ವೈಭವದಿಂದ ಜರುಗಿತು.
ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ  ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. ಅಂಕಗಳ ಜೊತೆಗೆ ಒಳ್ಳೆಯ ಮೌಲ್ಯ, ಆದರ್ಶಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಮನುಷ್ಯರಾಗಲು ಸಾಧ್ಯ. ಸ್ವಾಭಿಮಾನದ ಮೂಲಕ ಬದುಕುವುದು ಹೇಗೆ ಎನ್ನುವುದನ್ನು ಪೋಷಕರಿಂದ ಕಲಿತುಕೊಳ್ಳಲು ಸಾಧ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ  ಗಣೇಶ ಮೊಗವೀರರವರು,ನಮ್ಮ ಕಾಲೇಜು ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಸೆಸ್ಸೆಲ್ಸಿಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿಗೆ ದಾಖಲಾತಿ ಮಾಡಿಕೊಂಡು ಅವರಿಂದ ಉತ್ತಮ ಫಲಿತಾಂಶವನ್ನು ಪಡೆಯುವುದು ನಮ್ಮ ಧ್ಯೇಯ. ಹೀಗಾಗಿ ಕಳೆದೆರಡು ವರ್ಷಗಳಿಂದ ನಮ್ಮ ಉಪನ್ಯಾಸಕ ವೃಂದದವರ ಅವಿರತ ಶ್ರಮದಿಂದಾಗಿ ಕಾಲೇಜು ನೂರಕ್ಕೆ ನೂರು ಫಲಿತಾಂಶವನ್ನು ದಾಖಲಿಸುತ್ತಿರುವುದು ನಮ್ಮ ಕಾಲೇಜಿನ ಹೆಗ್ಗಳಿಕೆ ಎಂದರು.
ಮುಖ್ಯ ಅತಿಥಿಗಳಾಗಿ ಜನತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ  ಮಂಜು ಕಾಳಾವರ, ಜನತಾ  ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ಕು. ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.
ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಥಮ ಪಿ.ಯು.ಸಿ.ಗೆ ದಾಖಲಾದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸ್ವಾಗತಿಸಲಾಯಿತು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯ ಬೋರ್ಡ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ  ಸಾಧಕ ವಿದ್ಯಾರ್ಥಿಗಳನ್ನು  ಮತ್ತವರ ಪೋಷಕರನ್ನು ಸನ್ಮಾನಿಸಲಾಯಿತು.ನಂತರ  ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳಿಂದ “ಹಿಗ್ಗಿನ-ಬುಗ್ಗೆ” ಸಾಂಸ್ಕೃತಿಕ ವೈಭವ ಜರುಗಿತು.
ಪಾಂಶುಪಾಲರಾದ  ಗಣೇಶ ಮೊಗವೀರರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿ,ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!