Sunday, October 13, 2024

ಗೋ ಹತ್ಯೆ, ಗೋವುಗಳ ಅಕ್ರಮ ಸಾಗಾಟ ಮತ್ತು ಕಳ್ಳತನಕ್ಕೆ ಕಠಿಣ ಕ್ರಮಕ್ಕೆ ಶಾಸಕ ಗಂಟಿಹೊಳೆ ಆಗ್ರಹ| ಅಕ್ರಮ ತಡೆಗೆ ಸರಕಾರದಿಂದ ಕ್ರಮದ ಭರವಸೆ

(ಜನಪ್ರತಿನಿಧಿ ವಾರ್ತೆ) ಬೆಂಗಳೂರು: ರಾಜ್ಯದಲ್ಲಿ ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ರವರು ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ೨೦೨೩-೨೪ ನೇ ಸಾಲಿನಲ್ಲಿ ೪೪೭ ಗೋವು ಕಳ್ಳತನ ಪ್ರಕರಣಗಳು ಹಾಗೂ ೬೫೭ ಅಕ್ರಮ ಗೋವು ಸಾಗಟ ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ೨೦೨೩-೨೪ ರಲ್ಲಿ ೮ ಗೋವು ಕಳ್ಳತನ ಹಾಗೂ ೧೨ ಅಕ್ರಮ ಸಾಗಾಟ ಪ್ರಕರಣ ದಾಖಲಾಗಿವೆ ಎಂದರು.
ಗೋವು ಕಳ್ಳತನ,ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಈ ಕೆಳಗಿನಂತೆ ಕ್ರಮ ಜಾರಿಗೊಳಿಸಲಾಗಿದೆ.

ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು. ಅನುಮಾನಾಸ್ಪದ ವಾಹನಗಳನ್ನು ತಪಾಸನೆ ಮಾಡಲಾಗುತ್ತಿದೆ.
ದನ ಕಳವು / ಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ನಡೆಸಿದ್ದು ಅವರುಗಳು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ.

ಈ ಹಿಂದೆ ವರದಿಯಾದ ಪ್ರಕರಣಗಳಲ್ಲಿ ಆರೋಪಿತರಿಗೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಸಮಯದವರೆಗೆ ಬಾಂಡ್ ಪಡೆದುಕೊಳ್ಳಲಾಗುತ್ತಿದೆ.

ಬೀಟ್ ಸಿಬ್ಬಂದಿಯವರಿಗೆ ಈ ಬಗ್ಗೆ ಸೂಕ್ತ ಸೂಚನೆ ಗಳನ್ನು ನೀಡಿದ್ದು ಅವರ ಬೀಟ್ ವ್ಯಾಪ್ತಿಯಲ್ಲಿ ನಿಗಾ ಇಡಲು ಸೂಚಿಸಲಾಗಿದೆ.
ರಾತ್ರಿ ಗಸ್ತು, ರಾತ್ರಿ ಬೀಟ್ ಕಡ್ಡಾಯವಾಗಿ ನಡೆಸಲಾಗುತ್ತಿದೆ ಎಂದು ಸಚಿವರು ಬೈಂದೂರು ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!