Friday, October 18, 2024

2 ತಿಂಗಳ ಗೃಹಲಕ್ಷ್ಮೀ ಹಣ ಇನ್ನು 10 ದಿನಗಳಲ್ಲಿ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿದ್ದಾರೆ.

ಇಂದು(ಬುಧವಾರ) ವರದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವೆ ಹೆಬ್ಬಾಳ್ಕರ್, ಮೇ ತಿಂಗಳಲ್ಲಿ ಖಾತೆಗೆ ಹಣ ಹಾಕಿದ್ದೇವೆ. ಕೆಲವು ತಾಂತ್ರಿಕ ದೋಷಗಳಿಂದ ಜೂನ್ ಹಾಗೂ ಜುಲೈ 2 ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ ಡಿಬಿಟಿ ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಇನ್ನು 8 ರಿಂದ 10 ದಿನಗಳಲ್ಲಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಯೋಜನೆ ಸ್ಥಗಿತವಿಲ್ಲ :

ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂಬ ಊಹಾಪೋಹಗಳಿಗೂ ತೆರೆ ಎಳೆದಿರುವ ಸಚಿವರು, ಯಾವುದೇ ಕಾರಣಕ್ಕೂ ಯೋಜನೆ ಸ್ಧಗಿತ ಮಾಡುವುದಿಲ್ಲ. ಇದು ರಾಜ್ಯದ ಮಹಿಳೆಯರ ಅರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ಕೊಟ್ಟ ಭಾಷೆಯಂತೆ ನಾವು ಎಲ್ಲ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ಅವರು ಹೇಳಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮಾ : ಲಕ್ಷ್ಮೀ ಹೆಬ್ಬಾಳ್ಕರ್‌

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!