Sunday, September 8, 2024

ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

ಬೆಳ್ತಂಗಡಿ: ಕಳೆಂಜದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ, ಪ್ರಸಕ್ತ ಮಂಗಳೂರಿನ ಅರಣ್ಯ ಸಂಚಾರಿ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಒತ್ತುವರಿ ತೆರವು, ಕ್ರೀಡಾಕೂಟಗಳಲ್ಲಿ ಸಾಧನೆ ಇತ್ಯಾದಿ ಕೆಲಸ ಕಾರ್ಯಗಳು ಹಾಗೂ ಶೌರ್ಯ, ದಿಟ್ಟತನ ತೋರಿಸಿರುವ ಮೂಲಕ ಅರಣ್ಯ ಇಲಾಖೆಯಲ್ಲಿ ಗಣನೀಯ ಸಾಧನೆ ಮಾಡಿರುವ ಅಧಿಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿ‌ಆರ್‌ಎಫ್‌ಒ ಪ್ರಶಾಂತ್ 2023ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ.

2010ರಲ್ಲಿ ಇಲಾಖೆಗೆ ನೇಮಕ:
ಬಿ‌ಎಸ್ಸಿ ಪದವೀಧರರಾಗಿರುವ ಪ್ರಶಾಂತ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ನಿವಾಸಿಯಾಗಿದ್ದು, 2010ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಯಾಗಿದ್ದರು. ಧಾರವಾಡದ ಗುಂಗರಗಟ್ಟಿಯಲ್ಲಿರುವ ಕರ್ನಾಟಕ ಅರಣ್ಯ ಅಕಾಡೆಮಿಯಲ್ಲಿ ತರಬೇತಿ ಪೂರೈಸಿ, 2011ರಲ್ಲಿ ಕಲಬುರಗಿ ವೃತ್ತದ ಜೇವರ್ಗಿ, 2012ರಲ್ಲಿ ಕುದುರೆಮುಖ ವನ್ಯಜೀವಿ ವಲಯದ ಸಂಸೆ, 2013ರಲ್ಲಿ ಮೂಡುಬಿದಿರೆಯಲ್ಲಿ ಡಿ‌ಆರ್‌ಎಫ್‌ಒ ಆಗಿ ಕರ್ತವ್ಯ ನಿರ್ವಹಿಸಿದ್ದು, 2015 ರಲ್ಲಿ ಕಳೆಂಜಕ್ಕೆ ವರ್ಗಾವಣೆಗೊಂಡಿದ್ದರು. ಇತ್ತೀಚೆಗಷ್ಟೇ ಅವರು ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!