Wednesday, September 11, 2024

ಕೊನೆಯ ಎರಡು ದಿನಗಳ ಮಳೆಗಾಲದ ಅಧಿವೇಶನ : ಶಾಸಕರಿಗೆ ಕಾಂಗ್ರೆಸ್‌ನಿಂದ ವಿಪ್‌ ಜಾರಿ

ಜನಪ್ರತಿನಿಧಿ (ಬೆಂಗಳೂರು) : ಮಳೆಗಾಲದ ಅಧಿವೇಶನ ಮುಗಿಯಲು ಇನ್ನು 2 ದಿನಗಳು ಬಾಕಿ ಇರುವಾಗ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಜು.25 ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ.

ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ.

ಇಂದು (ಗುರುವಾರ) ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಕರ್ನಾಟಕ ಧನವಿಯೋಗ (ಸಂಖ್ಯೆ-4) ವಿಧೇಯಕ, ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ (2ನೇ ತಿದ್ದುಪಡಿ) ವಿಧೇಯಕ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ ಮಂಡಿಸಲಿದ್ದಾರೆ.

ಈ 3 ವಿಧೇಯಕಗಳಿಗೆ ಈಗಾಗಲೇ ಕೆಳಮನೆ ಅಂಗೀಕಾರ ನೀಡಿದೆ. ಇದರೊಂದಿಗೆ ಮುಖ್ಯಮಂತ್ರಿ ಇನ್ನೂ ಎರಡು ಮಹತ್ವದ ನಿರ್ಣಯ ಮಂಡಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!