spot_img
Tuesday, March 31, 2026
spot_img

ಸ.ಹಿ.ಪ್ರಾ.ಶಾಲೆ ಬೈಲೂರು: ‘ಕಲಿ ಕಲಿಸು ಕಲಾ ಅಂತರ್ಗತ ಕಲಿಕೆ’ ಕಾರ್ಯಕ್ರಮ

ಕುಂದಾಪುರ: ರಾಜ್ಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಂಗಳೂರು, ಇಂಡಿಯಾ ಪೌಂಡೇಷನ್ ಫಾರ್ ಆರ್ಟ್ಸ್ ಬೆಂಗಳೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇವರ ಸಹಯೋಗದಲ್ಲಿ ಜು.24 ರಂದು ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ “ಕರಾವಳಿಯ ವೀರ ವನಿತೆಯರು ಸಾಮಾಜಿಕ ಶೋಷಣೆ ಮತ್ತು ವಿದೇಶಿಯರ ವಿರುದ್ಧ ಹೋರಾಡಿ ನಾಡು ಕಟ್ಟಿದ ಕಥನಕ್ಕೆ ಯಕ್ಷರಂಗ ರೂಪ ನೀಡಿ ಶಾಲಾ ವಿದ್ಯಾರ್ಥಿನಿಯರಿಂದ ಅಭಿನಯಿಸುವುದು” ಎಂಬ ಯೋಜನೆಯ ಕಥನ ಮಾಲಿಕೆಯ 2ನೇ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ, ಸಮಾಜ ಸುಧಾರಕಿ ಕಮಲಾದೇವಿ ಚಟ್ಟೋಪಾಧ್ಯಾಯರ ಕುರಿತ ಕಥನವನ್ನು ಸಂಪನ್ಮೂಲ ವ್ಯಕ್ತಿ ಬಳ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಸಂತೋಷ ಇವರು ಮಕ್ಕಳಿಗೆ ಕಮಲಾದೇವಿಯರ ಜೀವನ, ಅವರು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದು, ಸ್ವಾತಂತ್ರ್ಯದ ನಂತರ ನಿರಾಶ್ರಿತರ ಸಮಸ್ಯೆಗೆ ಸ್ಪಂದಿಸಿದ್ದು, ಸೇವಾದಳದಲ್ಲಿ ಅವರ ಕಾರ್ಯ, ರಾಜಕೀಯ ಜೀವನ, ನೃತ್ಯ, ನಾಟಕ ಮತ್ತು ಕರಕುಶಲ ವೃತ್ತಿಗೆ ಅವರ ಕೊಡುಗೆಗಳನ್ನು ಮಕ್ಕಳಿಗೆ ತಿಳಿಸುತ್ತಾ, “ಕಮಲಾದೇವಿ ಚಟ್ಟೋಪಾಧ್ಯಾಯರು ಹಲವು ಹೋರಾಟಗಳ ಪ್ರಥಮ ಮಹಿಳೆ” ಎಂದು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ ಕಮಲಾದೇವಿ ಚಟ್ಟೋಪಾಧ್ಯಾಯರ ಕುರಿತು ಸಾಕ್ಷ್ಯ ಚಿತ್ರವನ್ನು ತೋರಿಸಲಾಯಿತು. ಕೊನೆಯಲ್ಲಿ ಮಕ್ಕಳಿಗೆ ಕಮಲಾದೇವಿಯವರ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯಕ್ಷಗುರು ಯಕ್ಷಸಿರಿ ಶಂಕರನಾರಾಯಣದ ಸಂಚಾಲಕರಾದ ಕಿಶೋರ ಕುಮಾರ ಉಪಸ್ಥಿತರಿದ್ದರು.

ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ ಯೋಜನೆಯ ನಿರ್ವಾಹಕರಾದ ಶಾಲಾ ಸಹ ಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು. ಗೌರವ ಶಿಕ್ಷಕಿ ವಿಶಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!