Sunday, September 8, 2024

ಉಭಯ ಸದನಗಳಲ್ಲೂ ಕೇಂದ್ರದ NEET ಪರೀಕ್ಷೆ ರದ್ದುಗೊಳಿಸುವ ನಿರ್ಣಯಕ್ಕೆ ಅಂಗೀಕಾರ !

ಜನಪ್ರತಿನಿಧಿ (ಬೆಂಗಳೂರು) : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡಲಾಗಿದೆ.

ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದೆ.

ಈ ಬಗ್ಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್,  ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಭಾಗದ ಬಡ ಮಕಳಿಗೆ ಹಿನ್ನಡೆಯಾಗುತ್ತಿದೆ. ವೈದ್ಯಕೀಯ ಶಿಕ್ಷಣಗಳ ಅವಕಾಶಗಳ ಮೇಲೆ ಹೊಡೆತ ಬೀಳುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಹಕ್ಕುಗಳನ್ನು ಕೇಂದ್ರದ ನೀಟ್ ಪರೀಕ್ಷಾ ವ್ಯವಸ್ಥೆ ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕನ್ನು ಕೇಂದ್ರ ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಪರಿಷತ್ತಿನಲ್ಲೂ ಮಸೂದೆಯನ್ನು ಅಂಗೀಕರಿಸಲಾಯಿತು. ನೀಟ್ ಪರೀಕ್ಷಾ ವ್ಯವಸ್ಥೆ ಬಡ ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ಕಿತ್ತುಕೊಳ್ಳುತ್ತಿದೆ. ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ.

NEET ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 (2019 ರ ಕೇಂದ್ರ ಕಾಯಿದೆ 30) ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ NEET ವ್ಯವಸ್ಥೆಯನ್ನು ಕೈಬಿಡಲಾಗಿದೆ, ”ಎಂದು ನಿರ್ಣಯವನ್ನು ಓದಿ ಅಂಗೀಕರಿಸಲಾಯಿತು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಹಾಗೂ ಸಿಇಟಿ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ಒದಗಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತು ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ.

ಇನ್ನು, ನಿನ್ನೆ(ಬುಧವಾರ) ಪಶ್ಚಿಮ ಬಂಗಾಳ ವಿಧಾನಸಭೆಯು NEET ರದ್ದುಗೊಳಿಸಲು ಹಾಗೂ ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕಾರ ಮಾಡಲಾಯಿತು.

ತಮಿಳುನಾಡು, ಪಶ್ಚಿಮ ಬಂಗಾಳ ಬಳಿಕ ನೀಟ್ ಪರೀಕ್ಷೆ ರದ್ದುಪಡಿಸಿದ ಮೂರನೇ ರಾಜ್ಯ ಎನ್ನುವುದಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಜ್ಯದಲ್ಲಿ ಒಟ್ಟು 10,945 ಸೀಟುಗಳಿದ್ದು ಅದರಲ್ಲಿ 3,200 ಸರ್ಕಾರಿ ವೈದ್ಯಕೀಯ ಸೀಟುಗಳು ಹಾಗೂ 7,745 ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಲಭ್ಯವಿದೆ.

Karnataka Assembly passes a resolution against NEET.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!