spot_img
Thursday, December 5, 2024
spot_img

ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಕ್ಕೆ ವಿಶ್ವವಿದ್ಯಾಲಯದಿಂದ ಅಧಿಸೂಚನೆ ಹೊರಡಿಸುವಂತೆ ಮಂಜುನಾಥ ಭಂಡಾರಿ ಮನವಿ

(ಜನಪ್ರತಿನಿಧಿ ವಾರ್ತೆ-ಕುಂದಾಪುರ:) ಉಡುಪಿ ಜಿಲ್ಲೆ ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಅಧಿಸೂಚನೆ ಹೊರಡಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರಿಗೆ ಮನವಿ ಮಾಡಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಇದರಡಿಯಲ್ಲಿ ಬ್ರಹ್ಮಾವರದಲ್ಲಿನ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರೆಸಲು ಸರ್ಕಾರದಿಂದ ಆದೇಶ ಬಂದಿದ್ದರೂ ಇಲ್ಲಿಯವರೆಗೆ ಶಿವಮೊಗ್ಗ ವಿಶ್ವವಿದ್ಯಾನಿಲಯದಿಂದ ಅಧಿಸೂಚನೆ ಹೊರಡಿಸಿರುವುದಿಲ್ಲ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಇದರ ಅಧೀನದಲ್ಲಿರುವ ಕೃಷಿ ಡಿಪ್ಲೋಮಾ ಕಾಲೇಜು ಮಂಡ್ಯ ಇವರು ಈಗಾಗಲೇ ಕೋರ್ಸ್ ಪ್ರಾರಂಭಿಸಲು ಅಧಿಸೂಚನೆ ಹೊರಡಿಸಿದ್ದಾರೆ. ಈ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳು ಕಾಲೇಜಿನವರನ್ನು ಸಂಪರ್ಕಿಸಿದಾಗ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿರುವುದಿಲ್ಲವೆಂದು ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಇವರಿಂದ ಅಧಿಸೂಚನೆ ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮಂಜುನಾಥ ಭಂಡಾರಿ ಮನವಿ ಮಾಡಿದ್ದಾರೆ.

ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್‌ನ್ನು ಪುನಃ ಆರಂಭಿಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಸಾಕಷ್ಟು ಹೋರಾಟ ನಡೆಸಿತ್ತು. ಸತತವಾಗಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಕೆ ಮಾಡಿತ್ತು. ಇದೆಲ್ಲದರ ಪರಿಣಾಮವಾಗಿ ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಪುನ ಆರಂಭಿಸುವಂತೆ ಸರ್ಕಾರ ಒಪ್ಪಿಗೆ ಸೂಚಿಸಿತ್ತು.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!