spot_img
Saturday, December 7, 2024
spot_img

ನಾಳೆಯಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ ಹಾಗೂ ಪರಿಶೀಲನೆ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಆರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳನ್ನು ರಚಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ, ಆರಗ ಜ್ಞಾನೇಂದ್ರ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯಲ್ಲಿ, ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಪ್ರವಾಹದಿಂದಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದೆ.

ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ, ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ಅವರ ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!