Saturday, October 12, 2024

ಗಿಡ-ಮರಗಳು ಬದುಕಿನ ಅವಿಭಾಜ್ಯ ಅವಶ್ಯಕತೆ : ಮನೋಹರ್ ಆರ್ ಕಾಮತ್ | ನಾಡಾ : ಐಟಿ‌ಐ ಸಂಸ್ಥೆಯಲ್ಲಿ ವನ ಮಹೋತ್ಸವ

ಕುಂದಾಪುರ : ಮನುಷ್ಯನ ಬದುಕಿನ ಅವಿಭಾಜ್ಯ ಅವಶ್ಯಕತೆಯಾಗಿರುವ ಸಸ್ಯರಾಶಿಗಳನ್ನು ಉಳಿಸಿ-ಬೆಳೆಸುವ ಮೂಲಕ ಜೀವ ಕುಲವನ್ನು ಸಂರಕ್ಷಣೆ ಮಾಡುವ ಕೆಲಸ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅವರ ನೇತ್ರತ್ವದಲ್ಲಿ ನಡೆಯುತ್ತಿರುವುದು ಅತ್ಯಂತ ಸುತ್ಯರ್ಹ ಎಂದು ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿ‌ಐ ಕಾಲೇಜಿನ ಪ್ರಾಂಶುಪಾಲ ಮನೋಹರ್ ಆರ್ ಕಾಮತ್ ನುಡಿದರು.

ನಾಡಾ ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿ‌ಐ ಕಾಲೇಜಿನಲ್ಲಿ ಸೋಮವಾರ ಕೋಟ ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ವರ್ಷಕ್ಕೆ ಕನಿಷ್ಠ ಒಂದು ಗಿಡಗಳನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡುವುದರಿಂದ ನಮ್ಮ ಪ್ರಕೃತಿಯ ಮಡಿಲು ಸೊಂಪಾಗುತ್ತದೆ. ಗಿಡ-ಮರಗಳು ಮರೆಯಾಗುತ್ತಿರುವುದರಿಂದ ಜೀವ ಕುಲದ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮಗಳನ್ನು ತಡೆಯುವ ಸದುದ್ದೇಶದಿಂದ ಕಳೆದ ಕೆಲವು ವರ್ಷಗಳಿಂದ ಕೋಟಾದ ಗೀತಾನಂದ ಫೌಂಡೇಶನ್ ಮೂಲಕ ಲಕ್ಷಾಂತರ ಸಸಿಗಳ ಬೆಳವಣಿಗೆಯ ಅಭಿಯಾನ ನಡೆಯುತ್ತಿರುವುದು ಸಮಾಜಕ್ಕೆ ಮಾದರಿಯಾದುದು ಎಂದರು.

ರೇ.ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜಾ ಸ್ಮಾರಕ ಐಟಿ‌ಐ ಆಡಳಿತ ಮಂಡಳಿಯ ಕಾರ್ಯದರ್ಶಿ ನವೀನ್ ಲೋಬೋ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ಮೋಹನ್‌ಚಂದ್ರ ಪಿ ನಾಯಕ್, ದೀನೇಶ್ ಬೈಂದೂರು, ಕೆ.ಪ್ರೇಮರಾಜ್ ಶೆಟ್ಟಿ, ಯೋಗೀಶ್ ಬಂಕೇಶ್ವರ, ಡೆಬ್ರಿಲ್ ಫೆರ್ನಾಂಡಿಸ್, ಶ್ರೀಕಾಂತ್ ನಾಯಕ್ ಹಾಗೂ ಸಿಬ್ಬಂದಿ ಅಂತೋನಿ ಕ್ರಾಸ್ತಾ ಇದ್ದರು.

ಕಿರಿಯ ತರಬೇತಿ ಅಧಿಕಾರಿ ರಾಘವೇಂದ್ರ ಆಚಾರ್ ಕಟ್‌ಬೇಲ್ತೂರ್ ಸ್ವಾಗತಿಸಿದರು, ಕಿಶೋರ್ ಸಸಿಹಿತ್ಲು ಬೈಂದೂರು ನಿರೂಪಿಸಿದರು. ವನ ಮಹೋತ್ಸವ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಕೋಟದ ಗೀತಾನಂದ ಫೌಂಡೇಶನ್ ವತಿಯಿಂದ ನೀಡಲಾದ ಸಸಿಗಳನ್ನು ಹಸ್ತಾಂತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!