spot_img
Saturday, December 7, 2024
spot_img

ವಯನಾಡು ಗುಡ್ಡ ಕುಸಿತ : ಮೃತ ಪಟ್ಟವರ ಸಂಖ್ಯೆ 30ಕ್ಕೆ ಏರಿಕೆ | ಮುಂದುವರಿದ ವಿಪತ್ತು ಪರಿಹಾರ ಕಾರ್ಯಾಚರಣೆ : ಜಿಲ್ಲಾಧಿಕಾರಿ ಮಾಹಿತಿ

ಜನಪ್ರತಿನಿಧಿ (ಕೇರಳ ) : ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು 30 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತಪಟ್ಟಿದೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಹಾಗೂ ನೂಲ್ಪುಳ ಗ್ರಾಮಗಳು ಗುಡ್ಡ ಕುಸಿತದ ಪರಿಣಾಮದಿಂದಾಗಿ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್, ಗುಡ್ಡ ಕುಸಿತಗೊಂಡಿರುವ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳ ಜೊತೆಗೆ ಸ್ವಯಂಸೇವಕರು ಹಾಗೂ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸುತ್ತಿದ್ದಾರೆ. ಕರಮಂತೋಡು ನದಿಯ ಬಾಣಾಸುರ ಸಾಗರ ಅಣೆಕಟ್ಟಿನ ಶೆಟರ್ ನ್ನು ತೆರೆಯಲಾಗಿದ್ದು, ಕೆಳಭಾಗ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವೀಡಿಯೊ ಸಂದೇಶದಲ್ಲಿ, ಯುಡಿಎಫ್ ಶಾಸಕ ಟಿ ಸಿದ್ದಿಕ್, ಮುಂಡಕ್ಕೈ ಪ್ರದೇಶದಿಂದ ಜನರನ್ನು ವಿಮಾನಗಳ ಮೂಲಕ ಸ್ಥಳಾಂತರಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಸ್ತುತ, ಗುಡ್ಡ ಕುಸಿತದ ಕಾರಣದಿಂದ ಮೃತಪಟ್ಟವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. NDRF ಸಿಬ್ಬಂದಿ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!