Saturday, September 14, 2024

ವಯನಾಡು ಗುಡ್ಡ ಕುಸಿತ | ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ : ಪಿಣರಾಯಿ ವಿಜಯನ್‌

ಜನಪ್ರತಿನಿಧಿ (ಕೇರಳ) : ವಯನಾಡ್ ಗುಡ್ಡ ಕುಸಿತ ಪ್ರದೇಶದಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ವಿಜಯನ್ ಹೇಳಿದ್ದಾರೆ.

ಕಾರ್ಯಾಚರಣೆಯನ್ನು ಸಮನ್ವಯಗೊಳಿಸಲಾಗುವುದು ಹಾಗೂ ರಕ್ಷಣಾ ಚಟುವಟಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಗುಡ್ಡಗಾಡು ಜಿಲ್ಲೆಗೆ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್‌ಗೆ ತೆರಳಲಿವೆ ಎಂದು ಕೂಡ ತಿಳಿದು ಬಂದಿದೆ.

ವಯನಾಡ್ ಜಿಲ್ಲೆಯಲ್ಲಿ ಗುಡ್ಡ ಕುಸಿತ ಹಾಗೂ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು 9656938689 ಮತ್ತು 8086010833 ಪ್ರಕಟಣೆ ತಿಳಿಸಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳನ್ನು ವಿಪತ್ತು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ. ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಅಧಿಕಾರಿಗಳ ಪ್ರಕಾರ, ಭೂಕುಸಿತದ ಹಿನ್ನೆಲೆಯಲ್ಲಿ ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಅಥವಾ ಅವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್‌ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.

ವಿಪತ್ತು ಪ್ರದೇಶಗಳ ಸ್ಥಳೀಯರು ಹೇಳುವಂತೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!