spot_img
Thursday, December 5, 2024
spot_img

ವಯನಾಡು ಗುಡ್ಡ ಕುಸಿತ | ಮೋದಿ, ರಾಹುಲ್‌ ಸಂತಾಪ : ಸಂಪೂರ್ಣ ನೆರವಿನ ಭರವಸೆ

ಜನಪ್ರತಿನಿಧಿ (ನವ ದೆಹಲಿ) : ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಪ್ರಮಾಣದ ಗುಡ್ಡ ಕುಸಿತದ ಪರಿಣಾಮ ಭಾರಿ ಅನಾಹುತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೆರವಿನ ಭರವಸೆ ನೀಡಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ವಯನಾಡಿನ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತದ ಕಾರಣದಿಂದ ಹಲವರು ಸಂಕಷ್ಟಕ್ಕೆ ಸಿಲುಕಿರುವ ವಿಷಯ ತಿಳಿದಿದೆ. ಕುಟುಂಬಸ್ಥರನ್ನು, ತಮ್ಮವರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಎಲ್ಲಾ ರೀತಿಯಲ್ಲಿಯೂ ನೆರವು ಒದಗಿಸಲಿದೆ. ಪ್ರಸ್ತುತ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತೇನೆ ಎಂದಿದ್ದಾರೆ.

ವಯನಾಡು ಗುಡ್ಡ ಕುಸಿತ : ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್‌ ಪೋಸ್ಟ್‌.

ಪ್ರಧಾನಿ ಮೋದಿ ಸುರೇಶ್​ ಗೋಪಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಬಳಿಯೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಅವರಿಗೆ ಬೇಕಾದ ನೆರವು ಒದಗಿಸುವಂತೆ ಕೇಳಿದ್ದಾರೆ. ಸಚಿವ ಜಾರ್ಜ್​ ಅವರ ಬಳಿಯೂ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ವಿರೋಧ ಪಕ್ಷದ ನಾಯಕ ಮತ್ತು ವಯನಾಡ್‌ನ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ಕೋರಲು ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಗುಡ್ಡ ಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಇನ್ನೂ ಮಣ್ಣಿನಡಿ ಸಿಕ್ಕಿಬಿದ್ದವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಹೊರತರಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಲ್ಲದೇ,  ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ. ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಪ್ರಯತ್ನಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಮಗೆ ತಿಳಿಸಲು ನಾನು ಅವರಿಗೆ ವಿನಂತಿಸಿದ್ದೇನೆ ಎಂದು ರಾಗಾ ಹೇಳಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸರ್ಕಾರಕ್ಕೆ ಸಹಾಯ ಮಾಡುವಂತೆ ನಾನು ಎಲ್ಲಾ ಯುಡಿಎಫ್ ಕಾರ್ಯಕರ್ತರನ್ನು ಕೋರುತ್ತೇನೆ ಎಂದು ರಾಹುಲ್‌ ಹೇಳಿದ್ದಾರೆ.

ವಯನಾಡು ಗುಡ್ಡ ಕುಸಿತ : ರಾಹುಲ್‌ ಗಾಂಧಿ ಅವರ ಎಕ್ಸ್‌ ಪೋಸ್ಟ್‌

ಸಹಾಯವಾಣಿ: ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಕೇರಳದ ಚುರಲಮಲದಿಂದ ಮುಂಡಕ್ಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದ್ದು, ಮುಂಡಕ್ಕೈಗೆ ಸಂಪರ್ಕ ಕಡಿತಗೊಂಡಿದೆ.

ಮೂಲಗಳ ಮಾಹಿತಿಯ ಪ್ರಕಾರ, ಭಾರೀ ಪ್ರಮಾಣದ ಮಳೆಯ ಕಾರಣದಿಂದ ವಯನಾಡಿನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಆರೋಗ್ಯ ಇಲಾಖೆ- ರಾಷ್ಟ್ರೀಯ ಆರೋಗ್ಯ ಮಿಷನ್ ತುರ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು 9656938689 ಮತ್ತು 8086010833 ನೀಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!