spot_img
Wednesday, April 1, 2026
spot_img

ವಯನಾಡು ಗುಡ್ಡ ಕುಸಿತ : 66ಕ್ಕೇರಿದ ಮೃತಪಟ್ಟವರ ಸಂಖ್ಯೆ | ನಾಳೆ ರಾಗಾ, ಪ್ರಿಯಾಂಕಾ ವಯನಾಡಿಗೆ ಭೇಟಿ

ಜನಪ್ರತಿನಿಧಿ(ವಯನಾಡ್) : ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಸುಮಾರು 66 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಘಟನಾಸ್ಥಳಕ್ಕೆ ನಾಳೆ(ಬುಧವಾರ) ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವಿರೋಧ ಪಕ್ಷದ ನಾಯಕ ಹಾಗೂ ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಈಗಾಗಲೇ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು(ಮಂಗಳವಾರ) ಕೇರಳದ ವಯನಾಡ್‌ನಲ್ಲಿ ಭಾರೀ ಪ್ರಮಾಣದಲ್ಲಿ ಉಂಟಾದ ಗುಡ್ಡ ಕುಸಿತ ಸಂಭವಿಸಿದ ಬಳಿಕ ತಮ್ಮ ಅಧಿಕೃತ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. “ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಪೋಸ್ಟ್ ಮಾಡಿದ್ದಾರೆ.

‌ ಇನ್ನು, ಈ ಸಂಬಂಧ ವರದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, “ಇದು ಒಗ್ಗಟ್ಟು ಪ್ರದರ್ಶಿಸುವ ಸಮಯ. ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಗರಿಷ್ಠ ಜನರ ಜೀವ ರಕ್ಷಿಸಬೇಕು. ನಾವು ವಯನಾಡಿಗೆ ಹೋಗಲು ಯೋಜಿಸುತ್ತಿದ್ದೇವೆ, ಹೌದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡಿಗೆ ಭೇಟಿ ನೀಡಲು ಯೋಜಿಸುತ್ತಿದ್ದಾರೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!