spot_img
Wednesday, January 22, 2025
spot_img

ವಯನಾಡು ಗುಡ್ಡ ಕುಸಿತ | ಕೇರಳದ ನೆರವಿಗೆ ಕರ್ನಾಟಕ ಸಿದ್ಧ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕೇರಳದ ವಯನಾಡಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉಂಟಾದ ಭಾರಿ ಪ್ರಮಾಣದ ಗುಡ್ಡ ಕುಸಿತದಿಂದ ಅಪಾರ ಹಾನಿಯಾಗಿದ್ದು, ಪ್ರಾಣಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಕೇರಳದ ನೆರವಿಗೆ, ಕೇರಳಕ್ಕೆ ಬೇಕಾದ ಎಲ್ಲಾ ಅಗತ್ಯವಿರುವ ಸಹಾಯ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಹೇಳಿದ್ದಾರೆ.

ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ : ಸಿಎಂ ಸಿದ್ದರಾಮಯ್ಯ

ಮುಂದುವರಿದ ಕಾರ್ಯಾಚರಣೆ : ಗುಡ್ಡ ಕುಸಿತಗೊಂಡಿರುವ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ವಯನಾಡ್ ಜಿಲ್ಲೆಯಲ್ಲಿ ಗುಡ್ಡ ಕುಸಿತ ಹಾಗೂ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು 9656938689 ಮತ್ತು 8086010833 ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!