Tuesday, October 8, 2024

ಯಡಕುಮೇರಿ ಗುಡ್ಡ ಕುಸಿತ | ಸುರಕ್ಷತೆ ಪರಿಶೀಲನೆ ನಂತರವೇ ಮಂಗಳೂರಿಗೆ ರೈಲು ಸಂಚಾರ ಆರಂಭ : ನೈರುತ್ಯ ರೈಲ್ವೆ ಮಹಾಪ್ರಬಂಧಕ

ಜನಪ್ರತಿನಿಧಿ (ಹಾಸನ) : ‘ಯಡಕುಮೇರಿ-ಕಡಗರವಳ್ಳಿ ನಡುವಿನ  ಗುಡ್ಡ ಕುಸಿತದ ಸಂಭವಿಸಿರುವ ಸ್ಥಳದಲ್ಲಿ ಮೂರು ಏಜೆನ್ಸಿಗಳ ಪ್ರತಿನಿಧಿಗಳು ತಾಂತ್ರಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನೈರುತ್ಯ ರೈಲ್ವೆ ಮಹಾಪ್ರಬಂಧಕ ಅರವಿಂದ ಶ್ರೀವಾತ್ಸವ, ಪ್ರಯಾಣಿಕರ ಸುರಕ್ಷತೆ ಹಾಗೂ ರೈಲುಗಳ ಸಂಚಾರಕ್ಕೆ ಅನುಕೂಲವಾಗುವಂತೆ ದುರಸ್ತಿ ಮಾಡುವುದೇ ಪ್ರಥಮ ಆದ್ಯತೆ’ ಎಂದು  ತಿಳಿಸಿದ್ದಾರೆ.

ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ, ದುರಸ್ತಿ ಕಾರ್ಯವನ್ನು ಪರಿಶೀಲಿಸಿ ಮಾತನಾಡಿದ ಅವರು, ‘ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ವಿಶ್ವಾಸಾರ್ಹ ಸೇವೆ ಒದಗಿಸಲು ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಗಮನ ನೀಡಲಾಗುತ್ತಿದೆ. ಗುಡ್ಡ ಕುಸಿತದ ಸ್ಥಳ ಸುರಕ್ಷಿತ ಎಂದು ಖಚಿತವಾದ ಬಳಿಕವೇ ರೈಲುಗಳ ಸಂಚಾರ ಆರಂಭಿಸಲಾಗುವುದು. ದುರಸ್ತಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ನಿರಂತರ ಗುಡ್ಡ ಕುಸಿತ: ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಮಣ್ಣು ಕುಸಿಯುತ್ತಲೇ ಇದೆ. ಸ್ಥಳದಲ್ಲಿ ಎರಡು ಜೆಸಿಬಿಗಳನ್ನು ನಿಯೋಜಿಸಿದ್ದು, ಮಣ್ಣನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸ್ಥಳದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!