spot_img
Friday, April 25, 2025
spot_img

ಬಸ್ರೂರು: ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರ ಪದಗ್ರಹಣ ಸಮಾರಂಭವು ಶಾಲಾ ಆವರಣದಲ್ಲಿ ಜು.೨೯ರಂದು ನಡೆಯಿತು.

ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಸಂಚಿತ ೯ನೇ ತರಗತಿ ಹಾಗೂ ವಿದ್ಯಾರ್ಥಿ ಉಪನಾಯಕಿಯಾಗಿ ಸಾನ್ವಿ ಪೂಜಾರಿ ೮ನೇ ತರಗತಿ ಆಯ್ಕೆಯಾಗಿದ್ದರು. ಅದೇ ರೀತಿಯಲ್ಲಿ ಶಾಲಾ ಸಂಸತ್ತಿನ ಸದಸ್ಯರಾಗಿ ಪೃಥ್ವಿರಾಜ್ ೯ನೇ ತರಗತಿ, ರಿತೇಶ್ ೯ನೇ ತರಗತಿ, ಸನ್ಮಿತ ೯ನೇ ತರಗತಿ ಹಾಗೂ ಅಭಿಜ್ಞಾ ೮ ನೇ ತರಗತಿ ಇವರು ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆರ್ .ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಭಾಗವಹಿಸಿ ಪ್ರಜಾಪ್ರಭುತ್ವದ ಕುರಿತು ಮಕ್ಕಳಲ್ಲಿ ಅರಿವನ್ನು ಮೂಡಿಸಿದರು.

ಪ್ರಾಂಶುಪಾಲೆ ಮಮತಾ ಪೂಜಾರಿ ಚುನಾಯಿತ ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಆಶಾ ಸಂತೋಷ್ ಶೆಟ್ಟಿ ಹಾಗೂ ಸಹ ಆಡಳಿತಾಧಿಕಾರಿ ಸುಮಂತ್ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!