Friday, November 8, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೇಳಿದ ರಾಜ್ಯಪಾಲ ತಾವರ್‌ ಚಂದ್‌ ಗೆಲ್ಹೋಟ್‌

ಜನಪ್ರತಿನಿಧಿ (ಬೆಂಗಳೂರು): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಆರೋಪಕ್ಕೆ ಕೇಳಿಬರುತ್ತಿರುವುದಕ್ಕೆ ಸಂಬಂಧಿಸಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ “ಪ್ರತಿಕ್ರಿಯೆ” ಕೇಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿದೆ.

ಬಿಜೆಪಿ ಶಾಸಕರ ನಿಯೋಗವು ಜುಲೈ 25 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಹಾಗೂ ಮುಖ್ಯಮಂತ್ರಿಯ ರಾಜೀನಾಮೆಗೆ ಕೋರಿ ಮನವಿಯನ್ನು ಸಲ್ಲಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಬಿಜೆಪಿ ಮನವಿ ಪತ್ರವನ್ನು ಸಲ್ಲಿಸಿರುವುದರಿಂದ, ರಾಜ್ಯಪಾಲರು ಮುಖ್ಯಮಂತ್ರಿಯಿಂದ ಉತ್ತರವನ್ನು ಕೇಳುವುದು ಅನಿವಾರ್ಯವಾಗಿದೆ.

ರಾಜ್ಯಪಾಲರ ಕ್ರಮವನ್ನು ಉಲ್ಲೇಖಿಸಿದ ಗೃಹ ಸಚಿವ ಜಿ ಪರಮೇಶ್ವರ ಅವರು, ಇದು ರಾಜಕೀಯ ಪ್ರೇರಿತ ಎಂದು ನಂಬಲು ಕಾರಣವಿದೆ ಎಂದು ಹೇಳಿದರು. ಗೆಹ್ಲೋಟ್ ಅವರಿಗೆ ಕೆಲವು ಸಾಂವಿಧಾನಿಕ ಅಧಿಕಾರಗಳನ್ನು ನೀಡಲಾಗಿದೆ. ಅವರು ಆ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅದು ಮಿತಿ ದಾಟಿದರೆ ಅದು ಅನುಮಾನಗಳಿಗೆ ಕಾರಣವಾಗುತ್ತದೆ. ಇದರಲ್ಲಿ ಏನೋ ರಾಜಕೀಯ ನಡೆಯುತ್ತಿದೆ ಎಂಬ ಶಂಕೆ ಇದೆ ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಇನ್ನು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಒಂದು ವೇಳೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಲು ಮುಂದಾದರೇ ನಾವು ಇದನ್ನು ರಾಜಕೀಯ ಪ್ರೇರಿತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಅವರು ಹೇಳಿದರು. ರಾಜ್ಯಪಾಲರನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!